ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ

ಧಾರವಾಡ : ಶ್ರೀಕೃಷ್ಣ ಪಾರಿಜಾತ ನಾಟಕವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಹಿರಿಯ ಜಾನಪದ ಕಲಾವಿದ ಹಾಗೂ ಗಾಯಕ ಬಸವಲಿಂಗಯ್ಯ ಹಿರೇಮಠ (65 ವ) ರವಿವಾರ ಬೆಳಿಗ್ಗೆ ನಿಧನರಾದರು.
ಅವರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೂಲತಃ ಬೆಳಗಾವಿ ಜಿಲ್ಲೆಯ ಬೇಲೂರಿನವರಾದ ಬಸವಲಿಂಗಯ್ಯ ನೀನಾಸಂ ಶಿಕ್ಷಣ ಪಡೆದು, ಸುಗಮ ಸಂಗೀತ ಕ್ಷೇತ್ರದಲ್ಲಿ ಗಾಯಕರಾಗಿ ಹೆಸರು ಮಾಡಿದರು. ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿದವರು.
ಕುಲಗೋಡು ತಮ್ಮಣ್ಣ ವಿರಚಿತ 12 ಗಂಟೆಗಳ ಅವಧಿಯ ಶ್ರೀ ಕೃಷ್ಣ ಪಾರಿಜಾತವನ್ನು ಮೂರು ಗಂಟೆಯಲ್ಲಿ ಪ್ರೇಕ್ಷಕರ ಮನ ಮುಟ್ಟುವಂತೆ ಮಾಡಿ ಸಾವಿರಕ್ಕೂ ಅಧಿಕ ಪ್ರದರ್ಶನ ನೀಡಿದ್ದರು.
ಜಾನಪದ ಕಲಾವಿದ ಬಸಲಿಂಗಯ್ಯ ಧಾರವಾಡದ ನಿವಾಸಿಯಾಗಿದ್ದರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ಇವರ ಪತ್ನಿ ವಿಶ್ವೇಶ್ವರಿ ಹಿರೇಮಠ ಕೂಡ ಜಾನಪದ ಕಲಾವಿದೆಯಾಗಿದ್ದು ಜಾನಪದ ಸಂಶೋಧನಾ ಸಂಸ್ಥೆ ಮೂಲಕ ಬಸಲಿಂಗಯ್ಯ ಹಿರೇಮಠ ದಂಪತಿ ಕಲಾ ಸೇವೆ ಮಾಡುತ್ತಿದ್ದರು. ಜಾನಪದ ಸಂಶೋಧನಾ ಸಂಸ್ಥೆ ಮೂಲಕ ಯುವ ಕಲಾವಿದರಿಗೆ ಜಾನಪದ ಕಲೆ ತರಬೇತಿ ನೀಡಿದ್ದರು. ಕಂಚಿನ‌ಕಂಠದ ಜಾನಪದ ಗಾಯಕರಾಗಿದ್ದರು. ಅಮೆರಿಕ, ದುಬೈ ಸೇರಿದಂತೆ ಹಲವಾರುರ ರಾಷ್ಟ್ರಗಳಲ್ಲಿ ಕೂಡ ಕೃಷ್ಣ ಪಾರಿಜಾತ ಸಣ್ಣಾಟ ಪ್ರದರ್ಶನ ನೀಡಿದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement