ಕೋವಿಡ್‌ ಹೆಚ್ಚಳ: ದೆಹಲಿಯಲ್ಲಿ ರೆಸ್ಟೋರೆಂಟ್‌ಗಳು, ಬಾರ್‌ಗಳನ್ನು ಮುಚ್ಚಲು ಆದೇಶ

ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿತು ಮತ್ತು ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳನ್ನು ಮುಚ್ಚಲು ಆದೇಶಿಸಿದೆ. ಆದಾಗ್ಯೂ, ಮನೆ ಡೆಲಿವರಿ ಮತ್ತು ಪಾರ್ಸಲ್‌ಗಳಲ್ಲಿ ತಿನಿಸುಗಳನ್ನು ಒಯ್ಯಲು ಅನುಮತಿಸಲಾಗುತ್ತದೆ. ಡಿಡಿಎಂಎ ಸಭೆಯಲ್ಲಿ ಎಲ್-ಜಿ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ … Continued

ಬಿಜೆಪಿ ಅಧ್ಯಕ್ಷ ನಡ್ಡಾಗೆ ಕೋವಿಡ್‌ ಸೋಂಕು

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೋವಿಡ್ -19 ಗೆ ಸೋಂಕಿಗೆ ಒಳಗಾಗಿದ್ದೇನೆ ಎಂದು ಸೋಮವಾರ ಹೇಳಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮನ್ನು ಪ್ರತ್ಯೇಕಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದೇನೆ. ನನ್ನ ವರದಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. … Continued

ವಿಧಾನಸಭೆ ಚುನಾವಣೆ-2022: ಟೈಮ್ಸ್ ನೌ ಒಪಿನಿಯನ್‌ ಪೋಲ್‌-ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ಸಾಧ್ಯತೆ..!

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಾಹಿನಿ ಟೈಮ್ಸ್ ನೌ ಒಪಿನಿಯನ್‌ ಪೋಲ್‌ ನಡೆಸಿದ್ದು, ಪಂಜಾಬಿನಲ್ಲಿ ಆಮ್‌ ಆದ್ಮಿ ಪಾರ್ಟಿ (ಎಎಪಿ) ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನಲ್ಲಿ ಸರ್ಕಾರ ರಚಿಸುವ ಹಾದಿಯಲ್ಲಿದೆ ಎಂದು ಹೇಳಿದೆ. 2022ರ ಪಂಜಾಬ್ ಚುನಾವಣೆಯಲ್ಲಿ ಎಎಪಿ (AAP) ಸುಮಾರು 54-58 ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಒಪಿನಿಯನ್‌ … Continued

ವಿಧಾನಸಭೆ ಚುನಾವಣೆ -2022: ಬಿಜೆಪಿ ಉತ್ತರ ಪ್ರದೇಶ ಉಳಿಸಿಕೊಳ್ಳಲಿದೆಯೇ ? ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ ಪೋಲ್‌ ಏನು ಹೇಳುತ್ತದೆ..?

ನವದೆಹಲಿ: ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ ಪೋಲ್‌ ನಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಾಯಕತ್ವದಲ್ಲಿ, 403 ಸದಸ್ಯ ಬಲದ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಬಹುಮತ ಸಾಧಿಸಲಿದೆ ಎಂದು ಸಮೀಕ್ಷೆ ಹೇಳುತ್ತದೆ. ಎಬಿಪಿ ನ್ಯೂಸ್-ಸಿವೋಟರ್ ಅಭಿಪ್ರಾಯ ಸಂಗ್ರಹವು ಬಿಜೆಪಿ 223-235 ಸ್ಥಾನಗಳನ್ನು ಪಡೆಯಲು ಸಾಧ್ಯವಾಗುತ್ತದೆ … Continued

ಕರ್ನಾಟಕದಲ್ಲಿ ಸೋಮವಾರ ಹೊಸದಾಗಿ 11,698 ಕೊರೊನಾ ಸೋಂಕು, ಬೆಂಗಳೂರಲ್ಲಿ 146 ಓಮಿಕ್ರಾನ್‌ ಸೋಂಕು ದೃಢ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇವೇಳೆ ಬೆಂಗಳೂರಿನಲ್ಲಿ 146 ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ, ಅದರಲ್ಲಿ ಇಬ್ಬರು ಬೆಂಗಳೂರಿನವರು. ರಾಜ್ಯಾದ್ಯಂತ ಇಂದು 1,148 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಈಗ 60,148 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ … Continued

ಬಿಹಾರ ಸಿಎಂ ನಿತೀಶಕುಮಾರಗೆ ಕೊರೊನಾ ಸೋಂಕು

ಬಿಹಾರ: ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ನಿತೀಶ ಅವರು ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಇಂದು ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಕಚೇರಿ(ಸಿಎಂಒ) ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಗೌರವಾನ್ವಿತ ಸಿಎಂ ನಿತೀಶಕುಮಾರ ಅವರ ಕೊರೊನಾ ಪರೀಕ್ಷೆಯು ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಪ್ರಕಾರ, … Continued

ಕೋವಿಡ್‌ಗೆ ಹೆದರಿ ವಿಷ ಸೇವಿಸಿ ತಾಯಿ-ಮಗು ಸಾವು

ತಮಿಳುನಾಡಿನ ಮಧುರೈನಲ್ಲಿ ಕೋವಿಡ್ -19 ಸೋಂಕಿಗೆ ಒಳಗಾಗುವ ಭಯದಿಂದ 23 ವರ್ಷದ ಮಹಿಳೆ ಮತ್ತು ಅವರ ಮೂರು ವರ್ಷದ ಮಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಂಕಿನ ಭಯದಿಂದ ಮೃತ ಮಹಿಳೆಯ ತಾಯಿ ಮತ್ತು ಸಹೋದರರು ಸೇರಿದಂತೆ ಕುಟುಂಬದ ಐವರು ವಿಷ ಸೇವಿಸಿದ್ದಾರೆ. ಅವರಲ್ಲಿ ಮೂವರು ಬದುಕುಳಿದರೆ, ಮಹಿಳೆ ಮತ್ತು ಅವರ ಮೂರು ವರ್ಷದ ಮಗು … Continued

ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೋಮ್​ ಕ್ವಾರಂಟೈನ್​ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್​ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಇಂದು, ಸೋಮವಾರ ಬೊಮ್ಮಾಯಿಯವರು ಅಗಲಿದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್​ ಅಂತ್ಯಕ್ರಿಯೆಯಲ್ಲಿ … Continued

ಅಯ್ಯೋ ದೇವ್ರೆ..ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಸದ್ದಿಲ್ಲದೆ ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು..!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಮಗುವೊಂದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದ್ದು, ಕೋತಿಗಳು ಮಗುವನ್ನು ಎತ್ತಿಕೊಂಡು ಟೆರೇಸ್​ನ ಹೊರಭಾಗದಲ್ಲಿದ್ದ ನೀರಿನ ಟ್ಯಾಂಕ್​ನೊಳಗೆ ಹಾಕಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. 2 ತಿಂಗಳ ಮಗು ಮನೆಯ ಟೆರೇಸ್‌ನಲ್ಲಿರುವ ಕೋಣೆಯಲ್ಲಿ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿತ್ತು. ಗಾಳಿ ಬರಲೆಂದು ಅಜ್ಜಿ ಬಾಗಿಲು ತೆರೆದು, ಮೊಮ್ಮಗುವಿನೊಂದಿಗೆ … Continued

ಕಾಶಿ ಸನ್ನಿಧಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮೋದಿಯಿಂದ ಪಾದರಕ್ಷೆ ಉಡುಗೊರೆ

ವಾರಣಾಸಿ: ವಿಶ್ವ ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಣಬಿ(ಜೂಟ್)ನಿಂದ ತಯಾರಿಸಿದ 100 ಜೋಡಿ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇತ್ತೀಚೆಗೆ ವಾರಣಾಸಿಯಲ್ಲಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಿದ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಸನ್ನಿಧಾನಕ್ಕೆ ಭೇಟಿ ನೀಡಿಗ ವೇಳೆಯಲ್ಲಿ ಅನೇಕ ಕಾರ್ಮಿಕರು ಬರೀ ಕಾಲಲ್ಲೇ ದೇಗುಲದ ಸುತ್ತಮುತ್ತಲಿನ … Continued