ಬಿಜೆಪಿ ಅಧ್ಯಕ್ಷ ನಡ್ಡಾಗೆ ಕೋವಿಡ್‌ ಸೋಂಕು

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೋವಿಡ್ -19 ಗೆ ಸೋಂಕಿಗೆ ಒಳಗಾಗಿದ್ದೇನೆ ಎಂದು ಸೋಮವಾರ ಹೇಳಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮನ್ನು ಪ್ರತ್ಯೇಕಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದೇನೆ. ನನ್ನ ವರದಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸೂಚನೆಯಂತೆ ನಾನು ಸ್ವಯಂ ಐಸೋಲೇಟ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಹಾಗೂ ತಾವು ಚೆನ್ನಾಗಿರುವುದಾಗಿ ತಿಳಿಸಿದ್ದಾರೆ.

ವೈರಸ್‌ನ ಹೆಚ್ಚು ಹರಡುವ ಓಮಿಕ್ರಾನ್ ರೂಪಾಂತರವು ಹರಡುವಿಕೆಯನ್ನು ಉತ್ತೇಜಿಸುವುದರಿಂದ ಭಾರತವು ಸೋಂಕುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಾಣುತ್ತಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ