ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೋಮ್ ಕ್ವಾರಂಟೈನ್ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
ಇಂದು, ಸೋಮವಾರ ಬೊಮ್ಮಾಯಿಯವರು ಅಗಲಿದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಹೊಸ ರೂಪಾಂತರವಾದ ಓಮಿಕ್ರಾನ್‌ನಿಂದಾಗಿ ಕರ್ನಾಟಕವು ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದೆ. ಇಂದು, ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಹೊಸದಾಗಿ 146 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯನ್ನು 476 ಕ್ಕೆ ಹೆಚ್ಚಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ