ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಅಧಿಕಾರಿಗಳು: ನಿರಾಕರಿಸಿದ ಡಿಕೆಶಿ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು. ಆದರೆ ತನಗೆ ಪರೀಕ್ಷೆ ಅಗತ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಹಾಗೂ ಜಿಲ್ಲಾ ವೈದ್ಯಾಧಿಕಾರಿ ನಿರಂಜನ್ ಅವರಿಗೆ ನನಗೆ ಏನಾಗಿದೆ ಎಂದು ಟೆಸ್ಟ್​ ಮಾಡಲು ಬಂದಿದ್ದೀರಿ. ನನಗೆ ಯಾವುದೇ ಟೆಸ್ಟಿಂಗ್ ಅಗತ್ಯವಿಲ್ಲ. ನಾನು ಫಿಟ್ ಅಂಡ್ ಫೈನ್ ಇದ್ದೇನೆ. ಹೀಗಾಗಿ ನಾನು ಟೆಸ್ಟ್​ ಮಾಡಿಸಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳನ್ನು ವಾಪಸ್​ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement