ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ: ಡಿಕೆಶಿ, ಸಿದ್ದು ಸೇರಿ 30 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ರಾಮನಗರ : ಕಾಂಗ್ರೆಸ್​​ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್​​ ಠಾಣೆಯಲ್ಲಿ‌ ಎಫ್‌ಐಆರ್ ದಾಖಲಾಗಿದ್ದು, ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರದಿಂದ ಮೇಕೆದಾಟುನಿಂದ ಕಾಂಗ್ರೆಸ್ಸಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲು ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಮೇಕೆದಾಟುವಿನಿಂದ ಜನವರಿ 9 ರಂದು ಬೆಂಗಳೂರಿನವರೆಗೆ 10 ದಿನಗಳ ಸುದೀರ್ಘ ಪಾದಯಾತ್ರೆಯನ್ನು ಜನವರಿ 9 ರಂದು, ಪ್ರಾರಂಭಿಸಿತು. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ‘ನಮ್ಮ ನೀರು ನಮ್ಮ ಹಕ್ಕು’ (ನಮ್ಮ ನೀರು, ನಮ್ಮ ಹಕ್ಕು) ಎಂಬುದೇ ಈ ಮೆರವಣಿಗೆಯ ವಿಷಯವಾಗಿದೆ.
ಕನಕಪುರದ ಕಾವೇರಿ ಸಂಗಮದಿಂದ ಕಾಂಗ್ರೆಸ್ ವತಿಯಿಂದ ನಿನ್ನೆ ಆರಂಭಗೊಂಡ ಮೇಕೆದಾಟು ಪಾದಯಾತ್ರೆಯು ಸಾಯಂಕಾಲ ದೊಡ್ಡ ಆಲಹಳ್ಳಿ‌ ಗ್ರಾಮಕ್ಕೆ ತಲುಪಿದೆ. ಜ.19ರಂದು ಕೊನೆಯ ದಿನ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸಾಗಿ ಅಲ್ಲಿ ಪಾದಯಾತ್ರೆಯ ಸಮಾರೋಪ ನಡೆಯಲಿದೆ.
ವಾರಾಂತ್ಯದ ಕರ್ಫ್ಯೂ ವೇಳೆ ಪಾದಯಾತ್ರೆ ಕೈಗೊಂಡಿದ್ದಕ್ಕೆ ಜನರಿಂದ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಸಾಮಾನ್ಯ ಜನರು ರಸ್ತೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದವರ ಮೇಲೆ ಕ್ರಮ ಯಾಕಿಲ್ಲ ಎಂದು ಜನರು ಪ್ರಶ್ನಿಸಿದ್ದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement