ಸಿಎಂ ನೇತೃತ್ವದಲ್ಲಿ ಕೋವಿಡ್‌ ಸಭೆ: ಹಲವಾರು ಪ್ರಮುಖ ನಿರ್ಧಾರ

posted in: ರಾಜ್ಯ | 0

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ವೈರಸ್‌ ನಿಯಂತ್ರಣ ಹಾಗೂ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಹಲವು ನಿರ್ಧಾರಗಳನ್ನು ಮಾಡಲಾಗಿದೆ. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ … Continued

ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ಒಂದೆರಡು ದಿನದಲ್ಲಿ ಸಿಹಿಸುದ್ದಿ ಎಂದ ಸಚಿವ ಅಶ್ವಥ್ ನಾರಾಯಣ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.. ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ … Continued

ರಾಜ್ಯಾದ್ಯಂತ ಜ.31ರ ವರೆಗೆ ರಾತ್ರಿ ಕರ್ಫ್ಯೂ- ವಾರಾಂತ್ಯದ ಕರ್ಫ್ಯೂ ವಿಸ್ತರಣೆ: ಕೋವಿಡ್‌ ಮಾರ್ಗಸೂಚಿ ವಿಸ್ತರಿಸಿ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಜಾರಿಗೊಳಿಸಿರುವಂತ ಕೊರೊನಾ ಮಾರ್ಗಸೂಚಿಗಳು ಹಾಗೂ ವಾರಾಂತ್ಯದ ಕರ್ಫ್ಯೂವನ್ನು ಜನವರಿ 31ರ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪರಿಷ್ಕೃತ ವಿಸ್ತರಣಾ ಮಾರ್ಗಸೂಚಿ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಅವರು, ದಿನಾಂಕ 04-01-2022ರ ಮಾರ್ಗಸೂಚಿಗಳನ್ನು ದಿನಾಂಕ 31-01-2022ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ನೂತನ ಪರಿಷ್ಕೃತ ಕೊರೋನಾ ಮಾರ್ಗಸೂಚಿಯಂತೆ ಶಾಲಾ-ಕಾಲೇಜುಗಳಲ್ಲಿ … Continued

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ-2022: ಈಗ ಟೈಮ್ಸ್‌ ನೌ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಚುನಾವಣಾ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..?

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭೆಗೆ ಫೆಬ್ರುವರಿ 7ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮಾರ್ಚ್‌ 10ರಂದು ಮತ ಎಣಿಕೆ ನಡೆಯಲಿದೆ. ಟೈಮ್ಸ್ ನೌ ನಡೆಸಿದ ಒಪಿನಿಯನ್‌ ಪೋಲ್‌ ಸಮೀಕ್ಷೆಯು 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಗಳಿಸುವ ನಿರೀಕ್ಷೆಯಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ 2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 14,473 ಜನರಿಗೆ ಕೊರೊನಾ ದೃಢ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,473 ಹೊಸದಾಗಿ ಸೋಂಕು ದಾಖಲಾಗಿದೆ. ಇದೇವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ ಆಸ್ಪತ್ರೆಯಿಂದ 1,356 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 30,78,129 ಮಂದಿಗೆ ಕೊರೊನಾ ಬಂದಿದೆ. 39,66,461 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ … Continued

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ವೈಕುಂಠ ಏಕಾದಶಿಗೆ ಜನ ಸೇರುವಂತಿಲ್ಲ

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವರ್ಚುಲ್‌ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸಭೆಯ ಬಳಿಕ ಮಾತಾನಾಡಿದ ಅವರು, ಜಾತ್ರೆ, ಸಮಾವೇಶ, ಪ್ರತಿಭಟನೆಯಲ್ಲಿ ಜನಸಂದಣಿ ಸೇರುವಂತಿಲ್ಲ. ಹಾಗೂ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಪಾಲಿಸಬೇಕು. ವೈಕುಂಠ ಏಕಾದಶಿಯೆಂದು ದೇವಸ್ಥಾನದಲ್ಲಿ ಸಂಪ್ರದಾಯದಂತೆ ಮಾತ್ರ ಪೂಜೆ … Continued

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ. ಮಂಗಳವಾರ ಹೊರಡಿಸಿದ ಸುತ್ತೋಲೆಯಲ್ಲಿ, ಹಣಕಾಸು ಸಚಿವಾಲಯವು 2021-22 ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಗಡುವು ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ “ಕೋವಿಡ್‌ನಿಂದಾಗಿ ತೆರಿಗೆದಾರರು ಮತ್ತು ವಿವಿಧ ವರದಿಗಳ ಎಲೆಕ್ಟ್ರಾನಿಕ್ ಫೈಲಿಂಗ್‌ನಲ್ಲಿ ಮಧ್ಯಸ್ಥಗಾರರು ವರದಿ ಮಾಡಿದ ತೊಂದರೆಗಳನ್ನು … Continued

ಉತ್ತರ ಪ್ರದೇಶ ಕಾರ್ಮಿಕ ಸಚಿವರು ಬಿಜೆಪಿ ತೊರೆದ ನಂತರ ಮತ್ತೆ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ ಎಂದ ಶರದ್ ಪವಾರ್

ಮುಂಬೈ: ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟಕ್ಕೆ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಇವರ ಬೆನ್ನಲ್ಲೇ ಉತ್ತರ ಪ್ರದೇಶದ … Continued

ಮೇಕೆದಾಟು ಪಾದಯಾತ್ರೆ ಕೋವಿಡ್ ನಿಯಮ ಉಲ್ಲಂಘನೆ: ಡಿ.ಕೆ. ಸಹೋದರರು ಸೇರಿ 41 ಜನರ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲು..!

posted in: ರಾಜ್ಯ | 0

ರಾಮನಗರ: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎರಡನೇ ಎಫ್‌ಐಆರ್ ದಾಖಲಿಸಿದ್ದಾರೆ. ಎರಡನೇ ಎಫ್‌ಐಆರ್‌ನಲ್ಲಿ 41 ಮಂದಿಯನ್ನು ಹೆಸರಿಸಲಾಗಿದೆ. ಕೋವಿಡ್-19 ನಿರ್ಬಂಧಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಎರಡನೇ ಎಫ್‌ಐಆರ್‌ ದಾಖಲಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ … Continued

ಸಚಿವ ಮಾಧುಸ್ವಾಮಿಗೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಸಚಿವ ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ  ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ತಗುಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ವಿಮಾನನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿ ನಂತರ ಮನೆಗೆ ಮರಳಿದರು. ಮುಖ್ಯಮಂತ್ರಿಗಳಿಗೆ ಕೊರೊನಾ ತಗುಲಿದ ನಂತರ ಅವರ ಸಂಪರ್ಕದಲ್ಲಿದ್ದ ಸಚಿವರು ಪರೀಕ್ಷೆಗೆ ಒಳಗಾಗುತ್ತಿದ್ದು, ಸಚಿವ ಮಾಧುಸ್ವಾಮಿ … Continued