ಉತ್ತರ ಪ್ರದೇಶ ಕಾರ್ಮಿಕ ಸಚಿವರು ಬಿಜೆಪಿ ತೊರೆದ ನಂತರ ಮತ್ತೆ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ ಎಂದ ಶರದ್ ಪವಾರ್

ಮುಂಬೈ: ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟಕ್ಕೆ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಇವರ ಬೆನ್ನಲ್ಲೇ ಉತ್ತರ ಪ್ರದೇಶದ ಇತರ ಮೂವರು ಬಿಜೆಪಿ ಶಾಸಕರು ಮಂಗಳವಾರ ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲೇ ಶರದ್‌ ಪವಾರ್‌ ಅವರ ಈ ಹೇಳಿಕೆ ಬಂದಿದೆ.

ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ.
ಉತ್ತರ ಪ್ರದೇಶದ ಜನರು ಬದಲಾವಣೆಗಾಗಿ ಎದುರು ನೋಡುತ್ತಿದ್ದಾರೆ, ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ, ವಿಧಾನಸಭೆ ಚುನಾವಣೆಗೂ ಮುನ್ನ ಉತ್ತರ ಪ್ರದೇಶದಲ್ಲಿ ಕೋಮು ಧ್ರುವೀಕರಣ ಮಾಡಲಾಗುತ್ತಿದೆ, ಇದಕ್ಕೆ ಉತ್ತರ ಪ್ರದೇಶದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.
ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್, ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷವು ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು.
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಉತ್ತರ ಪ್ರದೇಶದ ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಿಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಅವರ ನಂತರ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಅವರನ್ನು ಅನುಸರಿಸಿ ಪಕ್ಷವನ್ನು ತೊರೆದರು. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.
ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ ರೋಷನ್ ಲಾಲ್ ವರ್ಮಾ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷ ಸೇರಲು ನಿರ್ಧರಿಸಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement