ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 14,473 ಜನರಿಗೆ ಕೊರೊನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,473 ಹೊಸದಾಗಿ ಸೋಂಕು ದಾಖಲಾಗಿದೆ. ಇದೇವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ ಆಸ್ಪತ್ರೆಯಿಂದ 1,356 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 30,78,129 ಮಂದಿಗೆ ಕೊರೊನಾ ಬಂದಿದೆ. 39,66,461 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.10.30ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಕೋವಿಡ್-19 ಮರಣ ಪ್ರಮಾಣ ಶೇ.0.03 ರಷ್ಟಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 479 ತಲುಪಿದೆ. ಈಗ ರಾಜ್ಯದಲ್ಲಿ 73,260 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,379 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಇಂದು 10,800 ಹೊಸ ಪ್ರಕರಣಗಳು ಪತ್ತೆಯಾಗಿದೆ ಹಾಗೂ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸೋಂಕಿತರ ಮಾಹಿತಿ
ಬಾಗಲಕೋಟೆ 9, ಬಳ್ಳಾರಿ 101, ಬೆಳಗಾವಿ 79, ಬೆಂಗಳೂರು ಗ್ರಾಮಾಂತರ 160, ಬೆಂಗಳೂರು ನಗರ 10,800, ಬೀದರ್ 43, ಚಾಮರಾಜನಗರ 86, ಚಿಕ್ಕಬಳ್ಳಾಪುರ 91, ಚಿಕ್ಕಮಗಳೂರು 41, ಚಿತ್ರದುರ್ಗ 47, ದಕ್ಷಿಣ ಕನ್ನಡ 583, ದಾವಣಗೆರೆ 56, ಧಾರವಾಡ 178, ಗದಗ 21, ಹಾಸನ 121, ಹಾವೇರಿ 8, ಕಲಬುರಗಿ 109, ಕೊಡಗು 29, ಕೋಲಾರ 139, ಕೊಪ್ಪಳ 2, ಮಂಡ್ಯ 263, ಮೈಸೂರು 562, ರಾಯಚೂರು 29, ರಾಮನಗರ 59, ಶಿವಮೊಗ್ಗ 136, ತುಮಕೂರು 332, ಉಡುಪಿ 250, ಉತ್ತರ ಕನ್ನಡ 106, ವಿಜಯಪುರ 20 ಮತ್ತು ಯಾದಗಿರಿಯಲ್ಲಿ 13 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement