ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ಒಂದೆರಡು ದಿನದಲ್ಲಿ ಸಿಹಿಸುದ್ದಿ ಎಂದ ಸಚಿವ ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ..

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಕುರಿತು ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯ ಚರ್ಚಿಸಲಾಗಿದೆ. ಅಲ್ಲದೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

https://twitter.com/drashwathcn?ref_src=twsrc%5Etfw%7Ctwcamp%5Etweetembed%7Ctwterm%5E1480935701600358400%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fc-n-ashwath-narayan-the-demand-for-a-guest-lecturer-was-brewing-in-a-couple-of-days%2F

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement