ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ: 20ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಮಂಗಳೂರು: ಬೈಕಂಪಾಡಿಯ  ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ರಾಸಾಯನಿಕ ಸೋರಿಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು, ಅವರಲ್ಲಿ 20ಕ್ಕೂ ಹೆಚ್ಚು  ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿಸುಮಾರು 26 ಮಂದಿ ಅಸ್ವಸ್ಥರಾಗಿದ್ದು, ಘಟನೆ ನಡೆದ ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಪಣಂಬೂರು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
ಯಾವುದೇ ರೀತಿ ಜೀವಾಪಾಯ ಆಗದಂತೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ಸ್ಥಳಕ್ಕೆ ಕದ್ರಿ ಅಗ್ನಿಶಾಮಕ ಹಾಗೂ ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.
ಸುತ್ತಮುತ್ತಲಿನ ಕಂಪನಿಗಳ ಜನರನ್ನು ಹಾಗೂ ಕಾರ್ಮಿಕರನ್ನು ತೆರವುಗೊಳಿಸಲಾಗುತ್ತಿದ್ದು, ಪಣಂಬೂರು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement