ಮೇಕೆದಾಟು ಪಾದಯಾತ್ರೆ ಕೋವಿಡ್ ನಿಯಮ ಉಲ್ಲಂಘನೆ: ಡಿ.ಕೆ. ಸಹೋದರರು ಸೇರಿ 41 ಜನರ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲು..!

ರಾಮನಗರ: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎರಡನೇ ಎಫ್‌ಐಆರ್ ದಾಖಲಿಸಿದ್ದಾರೆ. ಎರಡನೇ ಎಫ್‌ಐಆರ್‌ನಲ್ಲಿ 41 ಮಂದಿಯನ್ನು ಹೆಸರಿಸಲಾಗಿದೆ.

ಕೋವಿಡ್-19 ನಿರ್ಬಂಧಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಎರಡನೇ ಎಫ್‌ಐಆರ್‌ ದಾಖಲಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಅವರ ಹೆಸರನ್ನು ದಾಖಲಿಸಿದ್ದಾರೆ.ನಿನ್ನೆ ದೊಡ್ಡ ಆಲಹಳ್ಳಿ ಗ್ರಾಮದಿಂದ ಕೊರೊನಾ ನಿಯಮಾವಳಿ ಉಲ್ಲಂಘನೆ ‌ಮಾಡಿದ ಆರೋಪದ ಮೇಲೆ ಇಂದು ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ. ಈ ಹಿಂದೆ 30 ಕಾಂಗ್ರೆಸ್ ನಾಯಕರ ಹೆಸರಿಸಿ ಎಫ್‌ಐಆರ್ ದಾಖಲಾಗಿತ್ತು. ಆದರೂ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮುಂದುವರಿಸಿದರು.
ಡಿ.ಕೆ. ಶಿವಕುಮಾರ್ ಅವರು, “ಕೇವಲ 30 ಅಥವಾ 40 ಜನರ ವಿರುದ್ಧ ಏಕೆ ಎಫ್‌ಐಆರ್ ದಾಖಲಿಸಬೇಕು? ಸಾವಿರಾರು ಇದ್ದೆವು. ಅವರೆಲ್ಲರ ವಿರುದ್ಧ ದಾಖಲು ಮಾಡಿ. ನಮ್ಮನ್ನು ಜೈಲಿಗೆ ಕಳುಹಿಸಿ, ಬಂಧಿಸಿ. ನಾವು ಪಾದಯಾತ್ರೆ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ.
ಜನವರಿ 10, ಸೋಮವಾರದಂದು ಕಾಂಗ್ರೆಸ್ ಮುಖಂಡರು ಡಿ.ಕೆ. ಶಿವಕುಮಾರ್ ಅವರ ಗ್ರಾಮವಾದ ದೊಡ್ಡಾಲಹಳ್ಳಿಯಿಂದ ಕನಕಪುರದ ವರೆಗೆ ಪಾದಯಾತ್ರೆ ನಡೆಸಿದರು

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement