ಲತಾ ಮಂಗೇಶ್ಕರಗೆ ಕೋವಿಡ್ ಸೋಂಕು, ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಅವರನ್ನು ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಆದರೆ ರೋಗದ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಎಂದು ಅವರ ಸೊಸೆ  ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ನವೆಂಬರ್ 2019 ರಲ್ಲಿ, ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎದೆ ಸಂಬಂಧಿ ವೈರಲ್‌ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
ಭಾರತೀಯ ಚಿತ್ರರಂಗದ ಶ್ರೇಷ್ಠ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಲತಾ ಮಂಗೇಶ್ಕರ್ ಅವರು 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಪಡೆದರು. ಲತಾ ಮಂಗೇಶ್ಕರ್ ಅವರು ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಅನೇಕ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement