ಸಿಎಂ ಬೊಮ್ಮಾಯಿ ಪುತ್ರನಿಗೂ ಕೊರೊನಾ ಸೋಂಕು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಬೊಮ್ಮಾಯಿ ಅವರ ಪುತ್ರ ಭರತ ಬೊಮ್ಮಾಯಿ ಮತ್ತು ಅವರಿಗೂ ಕೋವಿಡ್ ಸೋಂಕು ತಗುಲಿದೆ.

ಈ ಕುರಿತಂತೆ ಭರತ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಅವರು ಟ್ವೀಟ್ ಮಾಡಿದ್ದಾರೆ
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಮುಖ್ಯಮಂತ್ರಿಗಳಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರ ನಿಕಟ ಸಂಪರ್ಕಕ್ಕೆ ಬಂದಿದ್ದ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಯಂ ಐಸೋಲೇಶನ್ ಗೆ ಒಳಗಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement