ಕರ್ನಾಟಕ ಸೇರಿ 8 ರಾಜ್ಯಗಳ‌ ಕೋವಿಡ್ ಸೋಂಕು ಹೆಚ್ಚಳ: ಕೇಂದ್ರ ಕಳವಳ

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಪಶ್ವಿಮ ಬಂಗಾಳ, ದೆಹಲಿ, ತಮಿಳುನಾಡು, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತಿನಲ್ಲಿ ಸೋಂಕು ಹೆಚ್ಚಳ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ‌
ಪಶ್ಚಿಮ ಬಂಗಾಳದಲ್ಲಿ ಕೊರೊನಾ ಪಾಸಿಟಿವಿ ಪ್ರಮಾಣ ಶೇ. 32.18, ಮಹಾರಾಷ್ಟ್ರ ಶೇ. 22.39 ,ದೆಹಲಿ ಶೇ.23.1 ರಷ್ಟು ಪಾಸಿಟೀವಿಟಿ ಪ್ರಮಾಣ ಇದೆ ಎಂದು ಹೇಳಿದ್ದಾರೆ‌
ವಿಶ್ವದಾದ್ಯಂತ ಒಮಿಕ್ರಾನ್ ಸೋಂಕಿಗೆ 115 ಮಂದಿ ಮೃತಪಟ್ಟಿದ್ದು ಈ ಪೈಕಿ ದೇಶದಲ್ಲಿ ಒಬ್ಬರು ರೂಪಾಂತರಿ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಯುರೋಪಿನ ಎಂಟು ದೇಶದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಇದು ಆತಂಕಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ