ನಾಳೆಯಿಂದ ಧಾರವಾಡ ನಗರ-ಗ್ರಾಮೀಣ, ಹುಬ್ಬಳ್ಳಿ ನಗರ-ಗ್ರಾಮೀಣ ತಾಲೂಕಿನಾದ್ಯಂತ 1-8ರ ವರೆಗಿನ ಭೌತಿಕ ತರಗತಿ ಬಂದ್: ಜಿಲ್ಲಾಧಿಕಾರಿ ಆದೇಶ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ಜಿಲ್ಲಾಧಿಕಾರಿ ನಿತೇಶ ಪಾಟೀ ಇಂದು (ಜ.12) ಆದೇಶ ಹೊರಡಿಸಿದ್ದಾರೆ.
ಅವರು ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಜ.11 ರಂದು (ನಿನ್ನೆ ದಿನ) ಧಾರವಾಡ ತಾಲೂಕಿನ ಪಾಸಿಟಿವಿಟಿ ದರ ಶೇ.5.38 ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಪಾಸಿಟಿವಿಟಿ ರೇಟ್ ಶೇ.11.76 ರಷ್ಟು ಇದೆ. ಹಾಗೂ ಶಾಲೆಗಳಲ್ಲಿ ಕೋವಿಡ್-19 ಕ್ಲಸ್ಟರ್ ಪ್ರಕರಣಗಳು ಕಂಡು ಬಂದಿವೆ. ಈ ಕುರಿತು ಜ.11ರಂದು ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಕೋವಿಡ್-19 ವೈರಾಣು ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಅದರಂತೆ ನಾಳೆ (ಜ.13)ಯಿಂದ ಮುಂದಿನ ಆದೇಶದವರೆಗೆ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿ ವರೆಗಿನ ಶಾಲೆಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ. ಹಾಗೂ ಈ ಅವಧಿಯಲ್ಲಿ ಆನ್‍ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement