ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ..? ಯಾಕೆ ಕ್ರಮ ಕೈಗೊಂಡಿಲ್ಲ: ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಗೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಅನುಮತಿ ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ‌ ಏಕೆ. ಯಾರಿಗಾಗಿ ಕಾಯುತ್ತಿದ್ದೀರಿ..? ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ಏಕೆ ಮುಂದುವರಿಸಲು ಅನುಮತಿಸಲಾಗಿದೆ ಮತ್ತು ಏಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದನ್ನು ಎರಡು ದಿನಗಳಲ್ಲಿ ತಿಳಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
“ನಮ್ಮ ನೀರು ನಮ್ಮ ಹಕ್ಕು” ಹೆಸರಿನಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ವಿರೋಧಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕರ್ನಾಟಕ ಈಗಾಗಲೇ ಕೊರೊನಾದಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ. ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಿದ್ದರೂ ಯಾಕೆ ಸುಮ್ಮನಿದ್ದೀರಿ. ಹೈಕೋರ್ಟ್ ಆದೇಶ ನೀಡುವವರೆಗೂ ನೀವು ಕ್ರಮ ಕೈಗೊಳ್ಳುವುದಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿತು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಈ ಅಪಾಯಕಾರಿ ಸಂದರ್ಭದಲ್ಲಿ ಜನ ಸೇರುವ ಸಮಾವೇಶ, ಧರಣಿ, ಪ್ರದರ್ಶನ, ಮೆರವಣಿಗೆಗಳಿಗೆ ನಿರ್ಬಂಧ ಹೇರಿದ್ದರೂ, ಅವುಗಳಿಗೆ ಅವಕಾಶ ನೀಡುತ್ತಿರುವುದು ಏಕೆ? ವಿಶೇಷವಾಗಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹೇಗೆ ಮುಂದುವರಿಸಿದೆ, ಅದನ್ನು ತಡೆಯಲು ಕ್ರಮ ಕೈಗೊಂಡಿಲ್ಲವೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಒಂದು ಹಂತದಲ್ಲಿ ಸರ್ಕಾರದ ಪರ ಸಹಾಯಕ ಅಡ್ವೊಕೇಟ್​ ಜನರಲ್ (ಎಎಜಿ ) ಸುಬ್ರಮಣ್ಯ ಅವರು ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಕೋರ್ಟ್​ಗೆ ಮಾಹಿತಿ ನೀಡಿದರು. ಅನುಮತಿ ಕೊಡದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆಯೇ? ಹೈಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತು.
ರಾಜ್ಯ ಸರ್ಕಾರಕ್ಕೆ ಒಂದು ದಿನ ಕಾಲಾವಕಾಶ ನೀಡಿದ್ದೇವೆ. ಎಸ್ಒಪಿ ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಎಂಬುದರ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್​ ತಾಕೀತು ಮಾಡಿತು.
ಏತನ್ಮಧ್ಯೆ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ತಮ್ಮ ನಿಲುವನ್ನು ಸಲ್ಲಿಸುವಂತೆ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಪಾದಯಾತೆರಯನ್ನು ಹೇಗೆ ಮತ್ತು ಏಕೆ ಮುಂದುವರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿದೆ.
ಇದೇವೇಳೆ ಪಾದಯಾತ್ರೆಗೆ ಅನುಮತಿ ತೆಗೆದುಕೊಳ್ಳಲಾಗಿದೆಯೇ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ತಿಳಿಸಲು ಅವರು ಕಾಂಗ್ರೆಸ್‌ಗೆ ಸೂಚಿಸಿತು. .
ಹೈಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ (ಜ.14) ಮುಂದೂಡಿತು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement