ಮೇಕೆದಾಟು ಪಾದಯಾತ್ರೆಯಿಂದ ಸಿದ್ದರಾಮಯ್ಯ ಮತ್ತೆ ಅರ್ಧಕ್ಕೆ ವಾಪಸ್‌

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿನ ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ಹೇಳಲಾಗಿದೆ.
ಇಂದು 7 ಕಿ.ಮೀ ಪಾದಯಾತ್ರೆಯಿಂದ ಬಳಲಿರುವ ಸಿದ್ದರಾಮಯ್ಯಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಸ್ವಲ್ಪಕಾಲ ವಿಶ್ರಾಂತಿಗೆ ಪಡೆದಿದ್ದರು. ನಂತರ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್‌ ಹೊರಟಿದ್ದಾರೆ.
ಇಂದು ಬೆಳಿಗ್ಗೆ ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋರ್ಟ್ ತೀರ್ಪನ್ನ ನಾವು ಪಾಲಿಸುತ್ತೇವೆ. ಕೋರ್ಟ್ 14 ರಂದು ಏನು ಸೂಚನೆ ಕೊಡುತ್ತದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
ಮೇಕೆದಾಟು ಪಾದಯಾತ್ರೆಗೆ ಜ.9ರಂದು ಆರಂಭವಾಗಿದ್ದು, ಬುಧವಾರವಾದ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಮೂರು ದಿನ ಪೂರೈಸಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement