ಮೇಕೆದಾಟು ಪಾದಯಾತ್ರೆ: 64 ಮಂದಿ ವಿರುದ್ಧ ಮೂರನೇ ಎಫ್​ಐಆರ್ ದಾಖಲು

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಕೋರಿ ಕಾಂಗ್ರೆಸ್ 11 ದಿನಗಳ ಪಾದಯಾತ್ರೆಯನ್ನು ಭಾನುವಾರ ಆರಂಭಿಸಿದ್ದು, ಕೋವಿಡ್-19 ಧಿಕ್ಕರಿಸಿದ ಆರೋಪದ ಮೇಲೆ ಈಗ ಪಾದಯಾತ್ರೆ ನೇತೃತ್ವ ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಕುಮಾರ ಹಾಗೂ ಇತರ 63 ಜನರ ಮೇಲೆ ಮೂರನೇ ಎಫ್‌ ಐಆರ್‌ ದಾಖಲಾಗಿದೆ.
64 ಜನರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಇದರಲ್ಲಿ ಸಂಸದ ಡಿ.ಕೆ.ಸುರೇಶ ಹಾಗೂ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರೂ ಸಹ ಇದೆ. ಜನವರಿ 11 ರಂದು, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಎರಡನೇ ಪ್ರಕರಣವನ್ನು ದಾಖಲಿಸಲಾಗಿತ್ತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ ಕೆ ಸುರೇಶ್ ಸೇರಿದಂತೆ ಸುಮಾರು 41 ಮಂದಿಯನ್ನು ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ಸೋಮವಾರ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಾಖಲಿಸಲಾಗಿತ್ತು.
ಭಾನುವಾರ, ‘ಪಾದಯಾತ್ರೆ’ಯಲ್ಲಿ ಕೋವಿಡ್‌-19 ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ 30 ಜನರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿತ್ತು.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ, ಸರ್ಕಾರದ ಕೋವಿಡ್-19 ನಿರ್ಬಂಧಗಳ ನಡುವೆಯೂ ಕಾಂಗ್ರೆಸ್ ತನ್ನ 11 ದಿನಗಳ ಪಾದಯಾತ್ರೆಯನ್ನು ಭಾನುವಾರ ಆರಂಭಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement