7 ವರ್ಷಗಳ ಹಿಂದಿನ ಪ್ರಕರಣದಲ್ಲಿ ಉತ್ತರ ಪ್ರದೇಶ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರಂಟ್ ಜಾರಿ

ನವದೆಹಲಿ: ಉತ್ತರ ಪ್ರದೇಶದಲ್ಲಿ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದ ನಂತರ, ಏಳು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.
ಸುಲ್ತಾನ್‌ಪುರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರಂಟ್‌ ಹೊರಡಿಸಿದ್ದು, ಈ ಬಂಧನ ವಾರಂಟ್ 2014 ರ ಪ್ರಕರಣಕ್ಕೆ ಸಂಬಂಧಿಸಿದೆ, ಆಗ ಅವರು ಬಹುಜನ ಸಮಾಜ ಪಾರ್ಟಿಯಲ್ಲಿದ್ದರು. ಇದರಲ್ಲಿ ಮೌರ್ಯ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜನವರಿ 24 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.
ಸ್ವಾಮಿ ಪ್ರಸಾದ್ ಮೌರ್ಯ ಅವರು 2014 ರಲ್ಲಿ ಮಾಡಿದ ಧಾರ್ಮಿಕ ಟೀಕೆಗಳಿಗೆ ಸಂಬಂಧಿಸಿದಂತೆ ಹಾಜರಾಗಬೇಕಾಗಿತ್ತು. ಅಲಹಾಬಾದ್ ಹೈಕೋರ್ಟ್ ಅವರ ವಿರುದ್ಧದ ಜಾಮೀನು ರಹಿತ ವಾರೆಂಟ್‌ಗೆ ತಡೆಯಾಜ್ಞೆ ನೀಡಿತ್ತು, ಅದು ಜನವರಿ 6 ರ ವರೆಗೆ ಮಾತ್ರ ಮಾನ್ಯವಾಗಿದೆ. ಅವರು ಇಂದು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು ಆದರೆ ಅವರು ಹಾಜರಾಗಲಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆ ಜನವರಿ 24 ರಂದು ನಡೆಯಲಿದೆ ಎಂದು ವಕೀಲ ಅನಿಲ್ ತಿವಾರಿ ಹೇಳಿದ್ದಾರೆ.
ದ್ವೇಷ ಭಾಷಣ ಪ್ರಕರಣದಲ್ಲಿ ಮೌರ್ಯ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲವಾದ ನಂತರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ. ಇದೀಗ ಜನವರಿ 24ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.
ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನಾಯಕನೊಂದಿಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದರು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement