ಕರ್ನಾಟಕದಲ್ಲಿ ಇಂದು 25 ಸಾವಿರ ಜನರಿಗೆ ಹೊಸದಾಗಿ ಕೊರೊನಾ ಸೋಂಕು..!

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಗುರುವಾರ, ಹೊಸದಾಗಿ ರಾಜ್ಯಾದ್ಯಂತ 25,005 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದೆ. ಬೆಂಗಳೂರಿನಲ್ಲಿಯೇ 18,374 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಕಾರ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2,01,704 ಜನರನ್ನು ಕೋವಿಡ್ ಪರೀಕ್ಷೆಗೆ ( Covid-19 Test ) ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 18,374 ಸೇರಿದಂತೆ ಕರ್ನಾಟಕದಲ್ಲಿ 25,005 ಮಂದಿಗೆ ಕೋವಿಡ್ ( Covid ) ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಈಗ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91 ಸಾವಿರ ಸೇರಿದಂತೆ ರಾಜ್ಯಾದ್ಯಂತ 1,15,733ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 2,363 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3 ಸೇರಿದಂತೆ ರಾಜ್ಯದಲ್ಲಿ 8 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು 25005 ಮಂದಿಗೆ ಕೋವಿಡ್ ದೃಢಪಟ್ಟ ಕಾರಣ, ಪಾಸಿಟಿವಿಟಿ ದರ ಶೇ.12.39ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement