ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರಾಜ್ಯದ ಸಿದ್ಧತೆ ಕ್ರಮಗಳನ್ನು ವಿವರಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು, ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ದಿನಕ್ಕೆ 2.5 ಲಕ್ಷಕ್ಕೆ ಮತ್ತು ಬೆಂಗಳೂರಿನಲ್ಲಿ 30,000 ಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮತ್ತೆ 5T ಟ್ರೇಸ್, ಟ್ರ್ಯಾಕ್, ಟೆಸ್ಟ್, ಟ್ರೀಟ್, ಟೆಕ್ನಾಲಜಿ ತಂತ್ರ ಕಾರ್ಯಗತಗೊಳಿಸಲಾಗುತ್ತಿದೆ. ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ಜಿನೋಮ್ ಲ್ಯಾಬ್‌ಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ, ಜೀನೋಮಿಕ್ ಸೀಕ್ವೆನ್ಸಿಂಗ್ ಫಲಿತಾಂಶಗಳ ಸಮಯವನ್ನು ಪ್ರಸ್ತುತ ಎರಡು ಮೂರು ದಿನಗಳಿಂದ 24-36 ಗಂಟೆಗಳ ವರೆಗೆ ಸುಧಾರಿಸಲಾಗುತ್ತಿದೆ. ಪ್ರತಿ ಲ್ಯಾಬ್ ಒಂದು ಸಮಯದಲ್ಲಿ 1875 ಮಾದರಿಗಳನ್ನು ಪ್ರಕ್ರಿಯೆಗೊಳಿಸಬಹುದು. ಆಸ್ಪತ್ರೆಗಳಲ್ಲಿ ಒಟ್ಟು ಹಾಸಿಗೆಗಳ ಪೈಕಿ ಶೇ. 30 ರಷ್ಟು ಹಾಸಿಗೆಗಳನ್ನು ಮಕ್ಕಳಿಗೆ ಮೀಸಲಿಡಲಾಗುತ್ತದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಹೊರ ರಾಜ್ಯಗಳಿಂದ ಬರುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ. 74 ಗಂಟೆಯೊಳಗಿನ ನೆಗೆಟಿವ್ ವರದಿ ತರಬೇಕಿದೆ ಎಂದು ತಿಳಿಸಿದರು.
ಜನವರಿ 1-11 ರ ವರೆಗೂ 62,000 ಸಕ್ರಿಯ ಪ್ರಕರಣಗಳು ಹೆಚ್ಚಾಗಿವೆ, ಇದರಲ್ಲಿ ಶೇ. 6 ರಷ್ಟು ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇ. 93 ರಷ್ಟು ಸೋಂಕಿತರು ಮನೆ ಪ್ರತ್ಯೇಕತೆಯಲ್ಲಿದ್ದಾರೆ ಎಂದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ