ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು

ಬೆಂಗಳೂರು: ಮೊದಲ ದಿನದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜನವರಿ 9ರಂದು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ವೇದಿಕೆಯಲ್ಲಿ ಭಾಷಣ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಲಕ್ಷಣ ರಹಿತ ಸೋಂಕು ತಗುಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ ಮಾಡಿದ್ದಾರೆ. ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮನೆ ಐಸೋಲೇಶನ್‍ನಲ್ಲಿದ್ದಾರೆ. ದೆಹಲಿಯ ತಮ್ಮ ಕಚೇರಿಯ ಐವರು ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಅವರು ಎಲ್ಲರೂ ಕೋವಿಡ್‌ ಲಸಿಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭಗೊಂಡಿದ್ದು, ದಿನದಿಂದ ದಿನೇ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈ ಮಧ್ಯೆ ಕಳೆದ ನಾಲ್ಕು ದಿನಗಳಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಯೋಜನೆಯನ್ನು ಹಮ್ಮಿಕೊಂಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement