ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಪುಟಾಣಿ ಸಮನ್ವಿ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಸಮನ್ವಿ ಮೃತಪಟ್ಟ ಘಟನೆ ಕೋಣನ ಕುಂಟೆ ಬಳಿ ನಡೆದಿದೆ.
ಆರು ವರ್ಷದ ಸಮನ್ವಿ, ತಾಯಿ ಅಮೃತ ನಾಯ್ಡು ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಕೋಣನ ಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಗಾಯಗೊಂಡಿರುವ ಅಮೃತಾ ನಾಯ್ಡು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನಮ್ಮ ಸೂಪರ್​ ಸ್ಟಾರ್​’ ಶೋನಲ್ಲಿ ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಭಾಗವಹಿಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement