ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ರದ್ದು

ಬೆಂಗಳೂರು: ಕೋವಿಡ್‌ -19 ನಿರ್ಬಂಧ ಇದ್ದರೂ ಸರ್ಕಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್‌ ನಾಯಕರು ಹೈಕೋರ್ಟ್‌ ತರಾಟೆಯ ನಂತರ ಇಂದು ಕೊನೆಗೊಳಿಸಿದ್ದಾರೆ.
ಸರ್ಕಾರದ ಆದೇಶ ಮತ್ತು ಹೈಕೋರ್ಟ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಇಂದು, ಗುರುವಾರ ಬೆಳಿಗ್ಗೆ ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಮೇಕೆದಾಟು ಪಾದಯಾತ್ರೆಯನ್ನು ಸದ್ಯಕ್ಕೆ ಮುಂದೂಡಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹೈಕಮಾಂಡ್ ಸೂಚನೆಯಂತೆ ತಾತ್ಕಾಲಿಕವಾಗಿ ಪಾದಯಾತ್ರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸ ಕೊವಿಡ್ ಕಡಿಮೆ ಆದ ಬಳಿಕ ಪಾದಯಾತ್ರೆ ಮುಂದುವರೆಯಲಿದೆ.
ಆದರೆ ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಮನಸ್ಸಿರಲಿಲ್ಲ. ಆದರೆ ಹೈಕಮಾಂಡ್ ನಿಲ್ಲಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ಈಗ ಯಾತ್ರೆಯನ್ನು ನಿಲ್ಲಿಸದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
 ಹೈಕಮಾಂಡ್ ಸೂಚನೆ:
ಇಂದು ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ನಿಲ್ಲಿಸುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲ ಮೂಲಕ ಸಂದೇಶ ರವಾನಿಸಲಾಗಿತ್ತು. ಅಲ್ಲದೆ ರಾಹುಲ್ ಗಾಂಧಿ ಕೂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ವಿವರಣೆ ಕೇಳಿದ್ದರು. ಅಲ್ಲದೇ ಯಾವುದೇ ಕಾಂಗ್ರೆಸ್ಸಿಗೆ ಅಪವಾದ ಬರದಂತೆ ನಡೆದುಕೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಪಾದಯಾತ್ರೆ ಮೊಟಕುಗೊಳಿಸಿದ್ದು, ಪರಿಸ್ಥಿತಿ ಸುಧಾರಿಸಿದ ಬಳಿಕ ಮುಂದುವರೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಸಿಎಂ ಬೊಮ್ಮಾಯಿ ಮನವಿ:
ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋವಿಡ್‌ ಹೆಚ್ಚಳದ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿದ್ದು, ಮೇಕೆದಾಟು ಯೋಜನೆ ಜಾರಿಗೆ ಬದ್ಧ ಎಂದು ತಿಳಿಸಿದ್ದಾರೆ.
ಬೊಮ್ಮಾಯಿ ಮನವಿ ಮಾಡಿದ್ದು, ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ಕೋರಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಿದೆ. ಈಗಾಗಲೇ ಹೈಕೋರ್ಟ್ ಪಾದಯಾತ್ರೆ ಬಗ್ಗೆ ತೀಕ್ಷಣ ಅಭಿಪ್ರಾಯ ನೀಡಿದೆ. ಜನ ಸೇರಿಸಿ ಪಾದಯಾತ್ರೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸರಿಯಲ್ಲ. ಈಗ ಪಾದಯಾತ್ರೆ ಬಿಟ್ಟು ಕೊರೊನಾ ಎದುರಿಸೋಣ ಎಂದು ಅವರು ಮನವಿ ಮಾಡಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement