ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈಗ ಮನೆ ಪ್ರತ್ಯೇಕತೆಯಲ್ಲಿದ್ದಾರೆ.
ಈ ಕುರಿತು ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನಗೂ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೆಮ್ಮು ಮತ್ತು ಜ್ವರವಿದೆ. ನಾನು ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದೇನೆ. ಹೀಗಾಗಿ ಕೊರೊನಾ ಹೆಚ್ಚು ಪರಿಣಾಮ ಬಾಧಿಸಿಲ್ಲ ಎಂದು ನಂಬಿದ್ದೇನೆ.
ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಪ್ಪದೇ ಪರೀಕ್ಷೆಗೆ ಒಳಪಟ್ಟು, ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿ ಇರಿ ಎಂದು ಅವರು ಮನವಿ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement