ಕರ್ನಾಟಕದಲ್ಲಿ ಹೊಸದಾಗಿ 28,723 ಕೊರೊನಾ ಸೋಂಕು ದಾಖಲು, 14 ಮಂದಿ ಸಾವು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಗುರುವಾರ ಮತ್ತಷ್ಟು ಹೆಚ್ಚಾಗಿದೆ.
ಇಂದು, ಗುರುವಾರ ಹೊಸದಾಗಿ 28,723 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 3,105 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.
ನಿನ್ನೆ ಬುಧವಾರ, ಸಂಖ್ಯೆ 25 ಸಾವಿರ ದಾಟಿತ್ತು. ರಾಜಧಾನಿ ಬೆಂಗಳೂರಿನಲ್ಲಿಯೇ 20,121 ಮಂದಿಗೆ ವೈರಸ್​ ಸೋಂಕು ದಾಖಲಾಗಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,41,337ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ.12.98 ರಷ್ಟಿದೆ. ಇಂದು ಒಂದೇ ದಿನ 2,21,205 ಜನರಿಗೆ ಕೋವಿಡ್​ ಟೆಸ್ಟ್ ಮಾಡಲಾಗಿದೆ. ಸಾಂಕ್ರಾಮಿಕ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

advertisement

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement