ಚೆನ್ನವೀರ ಕಣವಿಗೆ ಕೊರೊನಾ ಸೋಂಕು

ಧಾರವಾಡ: ಹಿರಿಯ ಕವಿ ಡಾ.ಚೆನ್ನವೀರ ಕಣವಿ ( 93 ವರ್ಷ) ಅವರಿಗೆ ರ‍್ಯಾಟ್ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಅವರನ್ನು ಇಲ್ಲಿನ ಎಸ್‌ಡಿಎಂ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ಗುರುವಾರ ಅವರಿಗೆ ರ‍್ಯಾಟ್ ಪರೀಕ್ಷೆ ಮೂಲಕಕೋವಿಡ್ ತಪಾಸಣೆ ನಡೆಸಲಾಗಿತ್ತು. ಇದರಲ್ಲಿ ಸೋಂಕು ಕಂಡುಬಂದಿದೆ. ಆದರೆ ತೀವ್ರ ತರಹದ ಲಕ್ಷಣಗಳಿಲ್ಲ, ಆದರೂ ಮತ್ತೊಮ್ಮೆ ದೃಢೀಕರಿಸಲು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನೂ ನಡೆಸಲಾಗಿದೆ. ಅದರ ವರದಿ ಬರುವುದು ಬಾಕಿ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ

ನಿಮ್ಮ ಕಾಮೆಂಟ್ ಬರೆಯಿರಿ

advertisement