ಭೀಕರ ಅಪಘಾತ: ಏಳು ಮಂದಿ ಸಾವು

ದಾವಣಗೆರೆ: ಜಗಳೂರು ತಾಲೂಕಿನ ಕಾನನಕಟ್ಟೆ ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಟಾಟಾ ಇಂಡಿಕಾ ಕಾರಿನಲ್ಲಿ ಬೆಂಗಳೂರುನಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ನಡೆದಿದೆ. ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಗಾಯಾಳು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಮೃತಪಟ್ಟವರೆಲ್ಲ ಯುವಕರು. ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ನಿಮ್ಮ ಕಾಮೆಂಟ್ ಬರೆಯಿರಿ

advertisement