ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಂಕ್ರಾಂತಿ ಗಿಫ್ಟ್‌..ವೇತನದಲ್ಲಿ ಭಾರೀ ಹೆಚ್ಚಳ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಂಕ್ರಾಂತಿ ಸಿಹಿಯನ್ನು ನೀಡಿದೆ. ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರ ಇದ್ದವರಿಗೆ 28 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ಇರುವವರಿಗೆ 32 ಸಾವಿರ ರೂ.ಗಳಿಗೆ ಸಂಬಳ ನಿಗದಿ ಮಾಡಲಾಗಿದೆಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರು ಅನೇಕ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಬಗ್ಗೆ ವರದಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಮಾರ್ ನಾಯಕ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದರು. ಈಗ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿ ಗಮನಿಸಿ ವರದಿಯನ್ನ ಅನುಷ್ಠಾನ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಯುಜಿಸಿ (UGC) ಅರ್ಹತೆ ಇರುವವರಿಗೆ, 5 ವರ್ಷ ಸೇವೆ ಸಲ್ಲಿಸಿದವರಿಗೆ ₹32 ಸಾವಿರ ನೀಡಲಾಗುತ್ತದೆ.  ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದೇ ವೇಳೆ ಧರಣಿ ಕೈಬಿಡುವಂತೆ ಅತಿಥಿ ಉಪನ್ಯಾಸಕರಿಗೆ ಸಚಿವ ಅಶ್ವತ್ಥ್ ನಾರಾಯಣ ಮನವಿ ಮಾಡಿದ್ದಾರೆ.ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಇದ್ದು ಆದರೆ ಐದು ವರ್ಷ ಸೇವೆ ಪೂರೈಸದ ಅತಿಥಿ ಉಪನ್ಯಾಸಕರಿಗೆ 30 ಸಾವಿರ ರೂ.ಗಳು ಹಾಗೂ ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಇಲ್ಲದ ಹಾಗೂ ಐದು ವರ್ಷ ಸೇವೆ ಪೂರೈಸದ ಅತಿಥಿ ಉಪನ್ಯಾಸಕರಿಗೆ 26 ಸಾವಿರ ರೂ.ಗಳನ್ನು ನಿಗದಿ ಪಡಿಸಲಾಗಿದೆ.

ಅತಿಥಿ ಉಪನ್ಯಾಸಕರನ್ನ ಕಾಯಂ ಮಾಡಲು ಸಾಧ್ಯವಿಲ್ಲ. ಕೃಪಾಂಕ ನೀಡುವ ಪ್ರಸ್ತಾಪವೂ ಇಲ್ಲ. ಸಂಬಳ ಜಾಸ್ತಿ ಮಾಡುವಂತೆ ಸಮಿತಿ ವರದಿ ನೀಡಿದೆ. ಅದನ್ನ ಸರ್ಕಾರ ಒಪ್ಪಿಕೊಂಡಿದೆ. ವರ್ಷದಲ್ಲಿ 10 ತಿಂಗಳು ಅತಿಥಿ ಉಪನ್ಯಾಸಕರಿಗೆ ಕೆಲಸ ಇರುತ್ತದೆ. ಪೂರ್ಣ ಕೆಲಸವನ್ನು ಅತಿಥಿ ಉಪನ್ಯಾಸಕರಿಗೆ ಕೊಡಲಾಗುತ್ತದೆ. ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭ
ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್‌ಲೈನ್ ಪೋರ್ಟಲ್ ಕೂಡ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಆಯ್ಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement