ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು, ಶನಿವಾರ ಬೆಳಗ್ಗೆ ವರದಿ ಬಂದಿದ್ದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.
ಸದ್ಯ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನ ನಿವಾಸದಲ್ಲಿ ಮನೆ ಪ್ರತ್ಯೇಕತೆಯಲ್ಲಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಅನೇಕ ರಾಜಕೀಯ ನಾಯಕರಿಗೆ ಸೋಂಕು ತಗುಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜು ಖರ್ಗೆ, ಸಚಿವರಾದ ನಾಗೇಶ, ಮಾಧುಸ್ವಾಮಿ, ನಾರಾಯಣ ಗೌಡ, ಸುನಿಲಕುಮಾರ, ಆರ್‌.ಅಶೋಕ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಸೇರಿದಂತೆ ಅನೇಕರಿಗೆ ಸೋಂಕು ದೃಢಪಟ್ಟಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ