ಬೈಕ್‌ ಮೇಲೆ ಏಕಾಏಕಿ ಕಾಡಾನೆ ದಾಳಿ: ವಿದ್ಯಾರ್ಥಿ ಸಾವು

ಮಡಿಕೇರಿ: ಬೈಕಿನಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾಗ ಕಾಡಾನೆಯೊಂದು ಕಾಫಿ ತೋಟದಿಂದ ರಸ್ತೆಗೆ ಬಂದು ಹಠಾತ್‌ ಬೈಕ್ ಸವಾರರ ಮೇಲೆ ದಾಳಿ ಮಾಡಿ ವಿದ್ಯಾರ್ಥಿಯೋರ್ವಯೊಬ್ಬನನ್ನು ಸಾಯಿಸಿದ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಕಾಡಾನೆ ದಾಳಿಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ವಿದ್ಯಾರ್ಥಿ ಆಶಿಕ್ (19) ಮೃತ ದುರ್ದೈವಿ.
ಕಾಡಾನೆ ದಾಳಿಗೆ ಆಶಿಕ್ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಆಶಿಕ್ ನನ್ನು ಗ್ರಾಮಸ್ಥರು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ಅಸ್ಮಿಲ್ (19) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಸಿದ್ದಾಪುರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement