ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆಗೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸ್‌ ಶಾಸಕ ಹಾಗೂ ಪ್ರಿಯಾಂಕ್‌ ಖರ್ಗೆ ಅವರಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದೆ. ಮೊನ್ನೆಯಷ್ಟೇ ಅವರ ತಂದೆ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಂಕು ದೃಢಪಟ್ಟಿತ್ತು. ಎರಡು ದಿನಗಳ ನಂತರ ಈಗ ಎರಡು ದಿನದ ಪ್ರಿಯಾಂಕ್‌ ಖರ್ಗೆಗೆ ಕೋವಿಡ್‌ ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮೊದಲ ಮತ್ತು ಎರಡನೇ ಕೋವಿಡ್‌ ಅಲೆಯಲ್ಲಿ ಸೋಂಕಿನಿಂದ ಪಾರಾಗಿದ್ದೆ. ಒಮ್ಮೆ ಕೊರೊನಾ ಪಾಸಿಟಿವ್‌ ಎಂದು ತಪ್ಪಾಗಿ ವರದಿ ಬಂದಿತ್ತು. ಹಲವು ಪರೀಕ್ಷೆಗಳಲ್ಲಿ ನೆಗೆಟಿವ್‌ ವರದಿ ಬಂದಿತ್ತು. ಆದರೆ ಈ ಬಾರಿ ನನಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ನಮ್ಮ ಸಿಬ್ಬಂದಿ ಕೂಡ ಕೊರೊನಾ ಪರೀಕ್ಷೆ ಮಾಡಿಸಿದ್ದು, ಅವರಿಗೆ ನೆಗೆಟಿವ್‌ ಬಂದಿದೆ. ಈಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‌ ಮೂಲಕ ಅವರು ಮನವಿ ಮಾಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ