ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು

posted in: ರಾಜ್ಯ | 0

ಭಟ್ಕಳ: ತಾಲೂಕಿನ ಪ್ರವಾಸಿ ತಾಣ ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಮುತ್ತು ನಿಂಗಪ್ಪ (32) ಎಂದು ಗುರುತಿಸಲಾಗಿದೆ.
ಹಾವೇರಿ ಜಿಲ್ಲೆಯ ಅಕ್ಕಿ ಆಲೂರುನಿಂದ ಒಂಬತ್ತು ಜನರ ತಂಡವು ಪ್ರವಾಸಕ್ಕಾಗಿ ಶುಕ್ರವಾರ ಮುರ್ಡೇಶ್ವರಕ್ಕೆ ಆಗಮಿಸಿತ್ತು, ದೇವರ ದರ್ಶನ ಪಡೆದ ನಂತರ ಮಧ್ಯಾಹ್ನ ಸುಮಾರು ಮೂರು ಗಂಟೆ ನಂತರ ಈಜಲು ಇವರು ಸಮುದ್ರಕ್ಕೆ ಇಳಿದಿದ್ದರು, ಈ ಸಂದರ್ಭದಲ್ಲಿ ಮುತ್ತು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶವವನ್ನು ಸಮುದ್ರದಿಂದ ಹೊರತೆಗೆಯಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ