ವಸತಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ದಾವಣಗೆರೆ: ಶುಕ್ರವಾರ ರಾತ್ರಿ ಊಟ ಸೇವಿಸಿದ ನಂತರ ಮಕ್ಕಳು ಬೆಳಿಗ್ಗೆ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.
ಶಾಲೆಯ ಸುಮಾರು 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದ್ದು, ಅಸ್ವಸ್ಥ ವಿದ್ಯಾರ್ಥಿಗಳಿಗೆ ಹೊನ್ನಾಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ. ಅಸ್ವಸ್ಥರಾಗಿರುವ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲೇ ಇದ್ದು ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ರೇಣುಕಾಚಾರ್ಯ ಸೂಚನೆ ನೀಡಿದ್ದಾರೆ.

ಮಕ್ಕಳಿಗೆ ಉಪಹಾರಕ್ಕೆ ಉಪ್ಪಿಟ್ಟು ನೀಡಲಾಗಿತ್ತು. ಇದನ್ನು ತಿಂದ ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಆಹಾರದ ಮಾದರಿಯನ್ನು ಪರಿಶೀಲನೆಗಾಗಿ  ದಾವಣೆಗೆರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ನಿಮ್ಮ ಕಾಮೆಂಟ್ ಬರೆಯಿರಿ

advertisement