ಸಂಕ್ರಾಂತಿ ಪುಣ್ಯಸ್ನಾನಕ್ಕೆಂದು ನದಿಗೆ ಹೋದ ಇಬ್ಬರು ಯುವಕರು ನೀರುಪಾಲು

posted in: ರಾಜ್ಯ | 0

ರಾಯಚೂರು: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಸ್ನೇಹಿತರಿಬ್ಬರು ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.

ಗಣೇಶ(30) ಹಾಗೂ ಉದಯಕುಮಾರ(31) ನೀರುಪಾಲಾದ ಯುವಕರು ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ದೇವಸುಗೂರು ಬಳಿ ಇರುವ ಕೃಷ್ಣಾ ನದಿಗೆ ಪುಣ್ಯಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದರು. ಆದರೆ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜೊತೆಗಿದ್ದ ಸ್ನೇಹಿತರು ತಕ್ಷಣವೇ ಅಗ್ನಿ ಶಾಮಕದಳಕ್ಕೆ ವಿಷಯ ತಿಳಿಸಿದ್ದು, ತಕ್ಷಣ ಸಿಬ್ಬಂದಿ ಬಂದು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಗಣೇಶ ಶವ ಪತ್ತೆಯಾಗಿದ್ದು ಉದಯ ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸದ್ಯ ಶಕ್ತಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ