ಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ತೇಜೋವಧೆ : ಮನನೊಂದು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

posted in: ರಾಜ್ಯ | 0

ಶಿವಮೊಗ್ಗ: ಸಾಲ ಕೊಟ್ಟಿದ್ದನ್ನು ವಾಪಸ್ ಕೊಡು ಎಂದು ಕೇಳಿದ್ದಕ್ಕೆ ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದ ವರದಿಯಾಗಿದೆ.
ಅಪಪ್ರಚಾರದ ಕಾರಣಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ಎಂಬವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು.
ವೀಣಾ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎಂಬವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು ಎನ್ನಲಾಗಿದೆ. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿ ವೀಣಾ ಚಾರತ್ರ್ಯದ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎನ್ನಲಾಗಿದೆ.
ಎಷ್ಟೇ ಕೇಳಿಕೊಂಡರು ಅವರು ಇದನ್ನೇ ಮುಂದುವರೆಸಿದ್ದರಿಂದ ಮನನೊಂದ ವೀಣಾ ವೀಣಾ(32) ತನ್ನ ಇಬ್ಬರು ಹೆಣ್ಣುಮಕ್ಕಳಾದ ವರ್ಷ(7), ಹಾಗೂ 1 ವರ್ಷದ ಮತ್ತೊಂದು ಮಗುವಿನೊಂದೊಗೆ ಹಂಚಿನ ಸಿದ್ದಾಪುರ ಬಳಿಯ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೀಣಾ ಅವರು ಜನೆವರಿ 13ರಂದು ತನ್ನ ತವರು ಮನೆ ಹೊಳಲ್ಕೆರೆಗೆ ಹೋಗಿ ಬರುವುದಾಗಿ ಹೇಳಿ ಬಸ್ ಹತ್ತಿಕೊಂಡು ಅಲ್ಲಿಂದ ಎರಡು ಕಿ.ಮೀ ಮುಂದಿನ ಭದ್ರಾ ಕಾಲುವೆ ಬಳಿ ಇಳಿದು ಅಲ್ಲಿ ತನ್ನ ಇಬ್ಬರು ಮ್ಮಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೀಣಾ ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಭದ್ರಾ ನಾಲೆಯ ದಡದ ಮೇಲೆಯೇ ಅವರ ಬ್ಯಾಗ್ ಪತ್ತೆಯಾಗಿದೆ. ವೀಣಾ ಮೃತದೇಹ ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ ಬಳಿ ಪತ್ತೆಯಾದರೆ, ಏಳು ವರ್ಷದ ಮೊದಲ ಮಗಳ ಮೃತದೇಹ ಚನ್ನಗಿರಿ ತಾಲ್ಲೂಕಿನ ನಲ್ಲೂರು ಬಳಿ ಪತ್ತೆಯಾಗಿದೆ. ಇನ್ನೊಬ್ಬಳ ಮೃತದೇಹ ಪತ್ತೆಗೆ ಶೋಧನಾ ಕಾರ್ಯ ನಡೆಯುತ್ತಿದೆ.
ಮೃತ ವೀಣಾ ಪತಿ ನೀಡಿದ ದೂರಿನ ಮೇರೆಗೆ ಅರಹತೋಳಲು ಗ್ರಾಮದ ಸಂತೋಷ(35)ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅವರ ಪತ್ನಿ ಆಶಾ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ