ಹಾವೇರಿ: ಎರಡು ಕಾರ್​ಗಳಿಗೆ ಲಾರಿ ಡಿಕ್ಕಿ-ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

posted in: ರಾಜ್ಯ | 0

ಹಾವೇರಿ: ಎರಡು ಕಾರುಗಳಿಗೆ ಲಾರಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಬಳಿ ನಡೆದ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಮೆಕ್ಕೆಜೋಳ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಸಂಭವಿಸಿದೆ. ಎರಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಒಂದೇ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ದುರ್ಘಟನೆ ನಡೆದಿದೆ ಎಂದು ಮಾಹಿತಿ ಲಭಿಸಿದೆ. ಘಟನೆಯಲ್ಲಿ ಒಟ್ಟು ಆರು ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ರಟ್ಟೀಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎರಡು ಕಾರುಗಳಲ್ಲಿ ಹತ್ತು ಜನರು ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ. ತಿಳಿದುಬಂದಿದೆ. ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ