ಬೆಳಗಾವಿ: ಮೂವರು ಮಕ್ಕಳ ನಿಗೂಢ ಸಾವು, ವರದಿ ಕೇಳಿದ ಆರೋಗ್ಯ ಸಚಿವ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್​ನಲ್ಲಿ ಮೂವರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದು, ಘಟನೆ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಂತ ಮುನ್ಯಾಳ ಅವರಿಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. .  13 ತಿಂಗಳ ಮಗು ಪವಿತ್ರಾ ಹುಲಗುರ್, 14 ತಿಂಗಳ ಮಗು ಮಧು ಉಮೇಶ್ ಕುರಗುಂದಿ ಮತ್ತು ಒಂದೂವರೆ ವರ್ಷದ ಚೇತನ ಪೂಜಾರಿ … Continued

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪತಿ-ಸ್ನೇಹಿತರು, ನಂತರ ಸಿಗರೇಟ್‌ನಿಂದಲೂ ಸುಟ್ಟರು: ನಾಲ್ವರ ಬಂಧನ

ಇಂದೋರ್: ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಆಕೆಯ ಪತಿ ಮತ್ತು ಆತನ ನಾಲ್ವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಮತ್ತು ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು  ಪೊಲೀಸರು ಹೇಳಿದ್ದಾರೆ. 32 ವರ್ಷದ ಮಹಿಳೆ ತನ್ನ ಪತಿ ಮತ್ತು ಇತರರು ಅಸ್ವಾಭಾವಿಕ ಲೈಂಗಿಕತೆಯನ್ನು … Continued

1993ರ ಮುಂಬೈ ಸ್ಫೋಟ ಪ್ರಕರಣದ ಆರೋಪಿ ಮೋಸ್ಟ್ ವಾಂಟೆಡ್ ಸಲೀಂ ಗಾಜಿ ಕರಾಚಿಯಲ್ಲಿ ಸಾವು: ವರದಿ

ಮುಂಬೈ: ಮೋಸ್ಟ್ ವಾಂಟೆಡ್ 1993ರ ಸರಣಿ ಸ್ಫೋಟದ ಆರೋಪಿ ದಾವೂದ್ ಗ್ಯಾಂಗ್ ಸದಸ್ಯ ಮತ್ತು ಚೋಟಾ ಶಕೀಲ್‌ನ ಆಪ್ತ ಸಹಾಯಕ ಸಲೀಂ ಗಾಜಿ, ಶನಿವಾರ ಪಾಕಿಸ್ತಾನದ ಕರಾಚಿಯಲ್ಲಿ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಗಾಜಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಕಳೆದ ಕೆಲವು ದಿನಗಳಿಂದ ಅಧಿಕ ರಕ್ತದೊತ್ತಡ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಎಂದು … Continued

ಇಂಡಿಯಾ ಓಪನ್ ಸಿಂಗಲ್ಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಭಾರತದ ಲಕ್ಷ್ಯ ಸೇನ್

ನವದೆಹಲಿ: ದೆಹಲಿಯಲ್ಲಿ ಭಾನುವಾರ ನಡೆದ ರೋಚಕ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ ಅವರನ್ನು 24-22, 21-17 ಸೆಟ್‌ಗಳಿಂದ ಸೋಲಿಸುವ ಮೂಲಕ ಭಾರತದ ಲಕ್ಷ್ಯ ಸೇನ್ ಇಂಡಿಯನ್ ಓಪನ್ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದಾರೆ. ಡಿಸೆಂಬರ್‌ನಲ್ಲಿ ಕಿಡಂಬಿ ಶ್ರೀಕಾಂತ್ ಅವರನ್ನು ಸೋಲಿಸಿ ಅಚ್ಚರಿಯ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದಿದ್ದ ಸಿಂಗಾಪುರದ ಆಟಗಾರನನ್ನು ಲಕ್ಷ್ಯ … Continued

ಕರ್ನಾಟಕದಲ್ಲಿ ಭಾನುವಾರ 34 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು, 3 ಜಿಲ್ಲೆಗಳಲ್ಲಿ ಸಾವಿರ ದಾಟಿದ ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ತಾಜಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ರಾಜ್ಯದಲ್ಲಿ ಇಂದು, ಭಾನುವಾರ ಒಟ್ಟು 34,047 ಪ್ರಕರಣಗಳು ದಾಖಲಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 5,902 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕಾರಾತ್ಮಕ ದರ 19.29%ಕ್ಕೆ ಏರಿದೆ. ಬೆಂಗಳೂರಿನಲ್ಲಿ 21,071 ಪ್ರಕರಣ ದಾಖಲಾಗಿದೆ. ಎಲ್ಲ … Continued

ಪಂಜಾಬ್‌ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ: ಟಿಕೆಟ್ ನಿರಾಕರಣೆ ನಂತರ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ ಸಿಎಂ ಚನ್ನಿ ಸಹೋದರ..!

ಚಂಡೀಗಢ: ವಿಧಾನಸಭೆ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದ್ದು, ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಕಿರಿಯ ಸಹೋದರ ಮನೋಹರ್ ಸಿಂಗ್ ಚನ್ನಿ ಅವರು ಬಸ್ಸಿ ಪಠಾನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಮತ್ತು ಕ್ಷೇತ್ರದಲ್ಲಿ ತನ್ನ ಹಾಲಿ ಶಾಸಕ ಗುರುಪ್ರೀತ್ ಸಿಂಗ್ ಅವರನ್ನು ಕಣಕ್ಕಿಳಿಸಿದ … Continued

ಇದು ಹಾರುವ ಜಿಂಕೆ…: ಇಂಟರ್‌ನೆಟ್‌ ಅನ್ನು ಅಕ್ಷರಶಃ ದಿಗ್ಭ್ರಮೆಗೊಳಿಸಿದ ಈ ಜಿಂಕೆ ನೆಗೆತದ ವಿಡಿಯೊ…ವೀಕ್ಷಿಸಿ

ಕಾಡಿನಲ್ಲಿ ಪ್ರಾಣಿಗಳನ್ನು ನೋಡುವ ಸಂತೋಷ ದುಸ್ತರವಾಗಿದೆ ಮತ್ತು ವನ್ಯಜೀವಿ ಪ್ರೇಮಿಗಳು ಯಾವಾಗಲೂ ವನ್ಯಜೀವಿಗಳು ಹೊಂದಿರುವ ಅಗಾಧ ಶಕ್ತಿ ಮತ್ತು ಅನಿಶ್ಚಿತತೆಯ ಮಧ್ಯೆಯೇ ಅವುಗಳು ಬದುಕು ರೀತಿ ಎಂಥವರನ್ನೂ ಬೆರಾಗಿಸುತ್ತದೆ. ಈಗ ವೈಲ್ಡ್‌ಲೆನ್ಸ್ ಇಕೋ ಫೌಂಡೇಶನ್ ಟ್ವಿಟರ್ ಹ್ಯಾಂಡಲ್ ಹಂಚಿಕೊಂಡಿರುವ ಅತಂತ್ಯ ಉಸಿರರು ಬಿಗಿ ಹಿಡಿದು ನೋಡಬೇಕಾದ ಥ್ರಿಲ್ಲಿಂಗ್‌ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು … Continued

ಕೊರೊನಾ ಸೋಂಕಿತ ಲತಾ ಮಂಗೇಶ್ಕರ್ ಆರೋಗ್ಯ ಸುಧಾರಿಸುತ್ತಿದೆ : ಮಹಾರಾಷ್ಟ್ರ ಆರೋಗ್ಯ ಸಚಿವ

ಮುಂಬೈ: ಇಲ್ಲಿನ ಆಸ್ಪತ್ರೆಯೊಂದರ ಐಸಿಯುನಲ್ಲಿ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಭಾನುವಾರ ತಿಳಿಸಿದ್ದಾರೆ. 92 ವರ್ಷದ ಗಾಯಕಿ ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾ ವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು ಮತ್ತು ಕಳೆದ ವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ … Continued

ಮುರ್ಡೇಶ್ವರದ ಸಾರ್ವಜನಿಕ ಮಹಾರಥೋತ್ಸವ ಇಲ್ಲ: ಒಳಾಂಗಣ ಪೂಜೆಗಷ್ಟೇ ಸೀಮಿತ

ಭಟ್ಕಳ: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನೆವರಿ 20 ರಂದು ನಡೆಯಲಿರುವ ಮುರ್ಡೇಶ್ವರದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ಕೋವಿಡ್ ನಿಯಮಗಳ ಪ್ರಕಾರ ಅನುಮತಿ ನೀಡಿಲ್ಲ.ಜಾತ್ರೆ ಕೇವಲ ದೇವಾಲಯದ ಒಳಾಂಗಣದ ಪೂಜೆ ಪುರಸ್ಕಾರಗಳಿಗೆ ಮಾತ್ರ ಸೀಮಿತವಾಗಿರಲಿದೆ ಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ತಿಳಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಮತ್ತು ಭಕ್ತಾರು ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ … Continued

ಅಂಕೋಲಾ: ಜನರೇ ಸ್ಮಶಾನ ಸ್ವಚ್ಛಗೊಳಿಸಿದರು..!

ಅಂಕೋಲಾ : ಇಲ್ಲಿಯ ತೆಂಕಣಕೇರಿಯ ಹಿಂದೂ ಸ್ಮಶಾನವನ್ನು ಭಾನುವಾರ ಊರ ಜನರು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ್ದಾರೆ. ಹೊಳೆಯ ಅಂಚಿನಲ್ಲಿರುವ ಈ ಸ್ಮಶಾನ ಭೂಮಿಯಲ್ಲಿ ಗಿಡಗಂಟಿಗಳು ಬೆಳೆದಿದ್ದವು. ಕೆಲವರು ಮಣ್ಣು ಕಸಕಡ್ಡಿ ತಂದು ಎಸೆದ ಕಾರಣ ಅಸಹ್ಯ ವಾತಾವರಣ ಸೃಷ್ಟಿಯಾಗಿತ್ತು. ಇದರಿಂದಾಗಿ ಶವ ಸಂಸ್ಕಾರಕ್ಕೆ ಬಂದವರು ಕಿರಿಕಿರಿ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶ್ರಮದಾನದ ಮೂಲಕ ಎಲ್ಲ … Continued