ಗೀಸರ್ ಅನಿಲ ಸೋರಿಕೆ: ತಾಯಿ-ಮಗಳು ಸಾವು

posted in: ರಾಜ್ಯ | 0

ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ವೇಳೆ ಗ್ಯಾಸ್ ಗೀಸರಿನಿಂದ ಅನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಸಂಭವಿಸಿದ್ದು, 35 ವರ್ಷದ ತಾಯಿ ಮಂಗಳಾ ಮತ್ತು 7 ವರ್ಷದ ಮಗಳು ಗೌತಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ತಾಯಿ ಮಗಳು ಸ್ನಾನಕ್ಕೆಂದು ಬಾತ್ ರೂಂಮಿಗೆ ಹೋಗಿದ್ದಾಗ ಗ್ಯಾಸ್ ಗೀಸರ್​ನಿಂದ ಅನಿಲ ಸೋರಿಕೆ ಉಂಟಾಗಿದೆ. ಇದರಿಂದ ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸಾವಿಗೀಡಾಗಿದ್ದಾರೆ. ಮಾಲೀಕರ ಮನೆಯ ಮಹಿಳೆಯು ಮನೆ ಬಳಿ ಬಂದಾಗ ಈ ಘಟನೆ ಗಮನಕ್ಕೆ ಬಂದಿದೆ.
ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು ಎನ್ನಲಾಗಿದೆ. ಮನೆಯಲ್ಲಿ ಗಂಡ, ಹೆಂಡತಿ, ಒಬ್ಬ ಮಗಳು ಮಾತ್ರವಿದ್ದು, ಬೆಳಗ್ಗೆ ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement