ಹರಿದ್ವಾರ ದ್ವೇಷ ಭಾಷಣ ಪ್ರಕರಣ :ಯತಿ ನರಸಿಂಹಾನಂದ ಬಂಧನ

ನವದೆಹಲಿ: ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಹಿಂದೂ ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ ಅವರನ್ನು ಉತ್ತರಾಖಂಡ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಶುಕ್ರವಾರ ವಾಸಿಂ ರಿಜ್ವಿ ಅಲಿಯಾಸ್ ಜಿತೇಂದ್ರ ತ್ಯಾಗಿಯನ್ನು ಪೊಲೀಸರು ಬಂಧಿಸಿದ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎರಡನೇ ವ್ಯಕ್ತಿ ಇವರಾಗಿದ್ದಾರೆ.
ಜಿತೇಂದ್ರ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. ಜಿತೇಂದ್ರ ತ್ಯಾಗಿ ಬಂಧನ ವಿರೋಧಿಸಿ ಹರಿದ್ವಾರದಲ್ಲಿ ಧರಣಿ ನಡೆಸುತ್ತಿದ್ದ ವೇಳೆ ಯತಿ ನರಸಿಂಹಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 2021 ರಲ್ಲಿ ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಭೆ ಅಥವಾ ‘ಧರ್ಮ ಸಂಸದ್’ ನಲ್ಲಿ, ಹಲವಾರು ಹಿಂದೂ ಧಾರ್ಮಿಕ ಮುಖಂಡರು ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಮತ್ತು ಪ್ರಚೋದನಾಕಾರಿ ಭಾಷಣಗಳ ವಿಡಿಯೊಗಳು ಕಾರ್ಯಕ್ರಮದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡವು. ಯತಿ ನರಸಿಂಹಾನಂದ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರನ್ನು ದ್ವೇಷ ಭಾಷಣ ಪ್ರಕರಣದಲ್ಲಿ ದಾಖಲಿಸಿರುವ ಎಫ್‌ಐಆರ್‌ಗಳಲ್ಲಿ ಹೆಸರಿಸಲಾಗಿದೆ.
ಈ ಪ್ರಕರಣದಲ್ಲಿ ಕೈಗೊಂಡ ಕ್ರಮಗಳ ಕುರಿತು ಹತ್ತು ದಿನಗಳೊಳಗೆ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement
ಓದಿರಿ :-   ಮನಿ ಮ್ಯಾಗ್ನೆಟ್, ಬಿಲಿಯನೇರ್‌ ಹೂಡಿಕೆದಾರ ರಾಕೇಶ್ ಜುಂಜುನ್​ವಾಲಾ ನಿಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement