ಆಸ್ಪತ್ರೆಗೆ ದಾಖಲಾಗಿರುವ ಕವಿ ಚೆನ್ನವೀರ ಕಣವಿ ಶೀಘ್ರವೇ ಗುಣಮುಖರಾಗಲಿ ; ಸಿಎಂ ಬೊಮ್ಮಾಯಿ ಹಾರೈಕೆ

ಆಸ್ಪತ್ರೆಗೆ ದಾಖಲಾಗಿರುವ ಕವಿ ಚೆನ್ನವೀರ ಕಣವಿ ಶೀಘ್ರವೇ ಗುಣಮುಖರಾಗಲಿ ; ಸಿಎಂ ಬೊಮ್ಮಾಯಿ ಹಾರೈಕೆ
ಧಾರವಾಡ: ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.

ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. ಎಂದು ಮುಖ್ಯಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ, ಹಿರಿಯ ಕವಿಗಳಾದ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದು ಸಮಾಧಾನಕರ. ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ.
ಜಿಲ್ಲಾಡಳಿತವು ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜ್‌ಮೆಂಟ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಡಾ| ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮ ವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement