ಬೆಳಗಾವಿ: ಮೂವರು ಮಕ್ಕಳ ನಿಗೂಢ ಸಾವು, ವರದಿ ಕೇಳಿದ ಆರೋಗ್ಯ ಸಚಿವ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್​ನಲ್ಲಿ ಮೂವರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದು, ಘಟನೆ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಂತ ಮುನ್ಯಾಳ ಅವರಿಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

.  13 ತಿಂಗಳ ಮಗು ಪವಿತ್ರಾ ಹುಲಗುರ್, 14 ತಿಂಗಳ ಮಗು ಮಧು ಉಮೇಶ್ ಕುರಗುಂದಿ ಮತ್ತು ಒಂದೂವರೆ ವರ್ಷದ ಚೇತನ ಪೂಜಾರಿ ಮೃತಪಟ್ಟಿದ್ದರು. ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಈ ಮಕ್ಕಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ.  ಈ ಬಗ್ಗೆ ತನಿಖೆ ಆರಂಭವಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕಾರಣ ಹೊರ ಬೀಳಲಿದೆ. ಮಕ್ಕಳ ಸಾವಿನ ಬಗ್ಗೆ ಕುಲಗೋಡ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿನ್ನೆ  ಒಂದು ಮಗು ಮೃತಪಟ್ಟಿತ್ತು. ಇಂದು ಮತ್ತೆ ಎರಡು ಮಗು ಮೃತಪಟ್ಟಿಪ್ಪಿವೆ. ಬಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಸದ್ಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಜ.12ರಂದು ಆರೋಗ್ಯ ಇಲಾಖೆ ಸಿಬ್ಬಂದಿ ರುಬೆಲ್ಲಾ ಲಸಿಕೆ ನೀಡಿದ್ದರು. ಇಂಜೆಕ್ಷನ್ ಪಡೆದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆರೋಗ್ಯ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿಯಿಂದ ಮಕ್ಕಳು ಮೃತಪಟ್ಟಿವೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಈ ಘಟನೆ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಶಶಿಕಂತ ಮುನ್ಯಾಳ ಅವರಿಗೆ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಜನವರಿ 12ರಂದು ಜಿಲ್ಲೆಯಲ್ಲಿ ರುಬೆಲಾ ಹಾಗೂ ಕೋವಿಡ್ -19 ಗೆ ಲಸಿಕೆಯನ್ನೂ ನೀಡಲಾಗುತಿತ್ತು.  ಆ ಸಂದರ್ಭದಲ್ಲಿ ಎಡವಟ್ಟು ಆಗಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಲಸಿಕೆ ತೆಗೆದುಕೊಂಡ ಬಳಿಕ ನಾಲ್ವರು ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.  21 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, 17 ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement