ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ – ಇಬ್ಬರು ಭಾರತೀಯರು ಸೇರಿ ಮೂವರ ಸಾವು

ದುಬೈ: ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾರದದ ಮೇಲೆ ಡ್ರೋನ್ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಭಾರತಿಯರು ಹಾಗೂ ಒಬ್ಬ ಪಾಕಿಸ್ತಾನಿ ಪ್ರಜೆ ಮೃತಪಟ್ಟಿದ್ದು, 6 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್ ಟ್ರಕ್‍ಗಳು ಸ್ಫೋಟಗೊಂಡಿವೆ ಹಾಗೂ ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಗಳ ಪ್ರಕಾರ ಸ್ಫೋಟ ಹಾಗೂ ಬೆಂಕಿ ಕಾಣಿಸಿಕೊಂಡ ಎರಡೂ ಸ್ಥಳಗಳಲ್ಲಿ ಡ್ರೋನ್‍ನ ಭಾಗಗಳು ಕಂಡುಬಂದಿವೆ. ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಬುಧಾಬಿ ಪೊಲೀಸರು ಮೃತರನ್ನು ಇಬ್ಬರು ಭಾರತೀಯರು ಮತ್ತು ಒಬ್ಬ ಪಾಕಿಸ್ತಾನಿ ಎಂದು ಗುರುತಿಸಿದ್ದಾರೆ. ಗಾಯಾಳುಗಳನ್ನು ಗುರುತಿಸಲಾಗಿಲ್ಲ, ಸಣ್ಣ ಅಥವಾ ಮಧ್ಯಮ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಾಥಮಿಕ ತನಿಖೆಗಳು ಡ್ರೋನ್‌ಗಳಿಗೆ ಸೇರಿದ ಸಣ್ಣ ಹಾರುವ ವಸ್ತುಗಳ ಪತ್ತೆಯಾಗಿವೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ, ಅದು ಎರಡು ಪ್ರದೇಶಗಳಲ್ಲಿ ಬಿದ್ದಿದೆ ಮತ್ತು ಸ್ಫೋಟ ಮತ್ತು ಬೆಂಕಿಗೆ ಕಾರಣವಾಗಿರಬಹುದು, ಯಾವುದೇ ಗಮನಾರ್ಹ ಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಹೆಚ್ಚಿನ ವಿವರಣೆ ನೀಡಿಲ್ಲ.
ಇರಾನ್ ಬೆಂಬಲಿತ ಯೆಮೆನ್‍ನ ಹೌತಿ ಪಡೆಗಳು ಸೌದಿ ಅರಾಮ್ಕೊದ ಘಟಕದ ಮೇಲೆ ದಾಳಿ ನಡೆಸಿದೆ. ಇರಾನ್ 2019ರಲ್ಲಿ ಯೆಮೆನ್‍ನಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಕಡಿಮೆಗೊಳಿಸಿತ್ತು. ಆದರೆ ಅದು ಸಶಸ್ತ್ರ ಮತ್ತು ತರಬೇತಿ ಪಡೆದ ಯೆಮೆನ್ ಪಡೆಗಳನ್ನು ತನ್ನ ನಿಯಂತ್ರಣದಲ್ಲೇ ಇಟ್ಟುಕೊಂಡಿದ್ದು, ಈಗ ಇರಾನ್‌ ಬೆಂಬಲಿತ ಹೌತಿ ಪಡೆಗಳು ದಾಳಿ ನಡೆಸಿವೆ ಎನ್ನಲಾಗಿದೆ. ಈ ಹಿಂದೆಯೂ ಸೌದಿ ರೇಬಿಯಾದ ಅಬ್ಕೈಕ್ ಮತ್ತು ಖುರೈಸ್‍ನಲ್ಲಿದ್ದ ಸೌದಿ ಅರಾಮ್ಕೋದ ತೈಲ ಘಟಕದ ಮೇಲೆ ಮೇಲೆ ದಾಳಿ ನಡೆದಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement