ಕರ್ನಾಟಕದಲ್ಲಿ ಲಾಕ್ಡೌನ್ ಇಲ್ಲ, ಶುಕ್ರವಾರದ ಸಭೆ ಬಳಿಕ ಕರ್ಫ್ಯೂ ಮುಂದುವರಿಕೆ ಬಗ್ಗೆ ನಿರ್ಧಾರ

ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೊನಾ ಗರಿಷ್ಠಮಟ್ಟ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ನೇತೃತ್ವದಲ್ಲಿ ನಡೆದ ವರ್ಚ್ಯುಲ್‌ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಲ್ಲಿಯವರೆಗೆ ರಾಜ್ಯದಲ್ಲಿ ವಾರಾಂತ್ಯ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂಬುದಾಗಿ ಕಂದಾಯ ಸಚಿವ ಅಶೋಶ ಸ್ಪಷ್ಟಪಡಿಸಿದರು.
ಇಂದು, ಸೋಮವಾರ ನಡೆದ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದರು. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚಿನದಾಗಿ ಮಾಡಲಾಗುತ್ತಿದೆ. ಅಷ್ಟು ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಲಸಿಕಾಕರಣವು ಐದಾರು ಜಿಲ್ಲೆಗಳಲ್ಲಿ ಕಡಿಮೆ ಆಗಿದೆ. ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇದನ್ನು ಹೆಚ್ಚಿಸಲು ಸೂಚಿಸಲಾಗಿದೆ ಎಂದರು.
ಚಾಮರಾಜನಗರದಲ್ಲಿ ಆಮ್ಲಜನಕದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ತಜ್ಞರು ಒಂದು ತಿಂಗಳೊಳಗೆ ಕೊರೊನಾ ಗರಿಷ್ಠ ಮಟ್ಟಕ್ಕೆ ತಲುಪುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಜನವರಿ 25ರ ಆಸುಪಾಸು ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಬಗ್ಗೆ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದರು.
ಎಲ್ಲಾ ತಜ್ಞರ ಅಭಿಪ್ರಾಯದ ನಂತರ ಶುಕ್ರವಾರ ಮತ್ತೊಮ್ಮೆ ಸಭೆಯನ್ನು ಸೇರಿ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಬಗ್ಗೆ ,ರಾತ್ರಿ ಕರ್ಫ್ಯೂ ವಿಸ್ತರಣೆ ಅಥವಾ ಕೊನೆ ಮಾಡಬೇಕೋ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೆ ಈಗಿರುವಂತೆ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ನಿಯಂತ್ರಣ ಕ್ರಮಗಳು ಮುಂದುವರೆಯಲಿವೆ. ಆ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ. ಕರ್ನಾಟಕದ ಜನರ ಪ್ರಾಣ ರಕ್ಷಣೆ ನಮ್ಮ ಮೇಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement