ಬೆಂಗಳೂರಿನಲ್ಲಿ ಜನವರಿ 31ರ ವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು : ಕೊರೊನಾ ಹೆಚ್ಚಳ ನಿಯಂತ್ರಣಕ್ಕೆ ತರಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್​ನ ಜನವರಿ 31ರವರೆಗೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ನಗರದಲ್ಲಿ ಜನವರಿ 6ರಿಂದ 19ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಈಗ ಜನವರಿ 31ರ ವರೆಗೂ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ರಾತ್ರಿ ಅಷ್ಟೇ ಅಲ್ಲ ಹಗಲಿನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ.
ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂಥವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಜನವರಿ 19ರವರೆಗೆ ಜಾರಿ ಮಾಡಿ ಆದೇಶಿಸಲಾಗಿದ್ದ ರಾತ್ರಿ ನಿಷೇಧಾಜ್ಞೆ ಹಾಗೂ ವಾರಾಂತ್ಯದ ನಿಷೇಧಾಜ್ಞೆ ಸೇರಿದಂತೆ ಕಠಿಣ ಮಾರ್ಗಸೂಚಿಯನ್ನು ತಿಂಗಳಾಂತ್ಯದ ವರೆಗೂ ವಿಸ್ತರಿಸಲಾಗಿದೆ.
ಕಳೆದ ಎರಡು ದಿನಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ ಇಂದು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚಮಟ್ಟಿನ ಇಳಿಕೆ ಕಂಡಿದ್ದು, 18,622 ಜನರಲ್ಲಿ ಸೋಂಕು ದೃಢಪಟ್ಟಿದೆ. ಜ.15ರಂದು ಅತಿಹೆಚ್ಚು ಅಂದರೆ 22,284 ಪ್ರಕರಣ ದೃಢಪಟ್ಟಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement