12ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?: ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ನವದೆಹಲಿ: ದೇಶದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಫೆಬ್ರವರಿ ಕೊನೆ ವಾರ ಅಥವಾ ಮಾರ್ಚ್‌ ಮೊದಲ ವಾರದಿಂದ ಈ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಹಾಗೂ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎನ್ .ಕೆ ಅರೋರಾ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ನಡುವೆ ಮಕ್ಕಳನ್ನು ಸೋಂಕಿನಿಂದ ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, 15 ರಿಂದ 17 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಕಾರ್ಯ ಯಶಸ್ವಿಯಾಗಿದೆ. 12ರಿಂದ14 ವರ್ಷದ ಮಕ್ಕಳಿಗೆ ಯಾವ ಲಸಿಕೆ ನೀಡಲಾಗುತ್ತಿದೆ ಎಂಬ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಈ ಬಗ್ಗೆ ಅಂತಿಮ ಹಂತದ ಪರೀಕ್ಷೆಗಳು ನಡೆಯುತ್ತಿದೆ. ಫೆಬ್ರವರಿ ಕೊನೆಯಲ್ಲಿ ಇಲ್ಲವೇ ಮಾರ್ಚ್ ತಿಂಗಳಿನಿಂದ 12ರಿಂದ14 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
15ರಿಂದ 17ವರ್ಷ ವಯೋಮಾನದ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ನೀಡುವುದು ಆರಂಭವಾಗಿದ್ದು ಇಲ್ಲಿಯತನಕ ೩.೩೧ ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 45%ರಷ್ಟು ಹದಿಹರಿಯದವರಿಗೆ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ತಿಂಗಳ ಅಂತ್ಯದ ವೇಳೆಗೆ 15ರಿಂದ 17ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ೭.೪ ಕೋಟಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗ ಕೆಲಸ ಮಾಡುತ್ತಿದೆ. ಮೊದಲ ಡೋಸ್ ಬಳಿಕ ಫೆಬ್ರವರಿಯಲ್ಲಿ ಎರಡನೇ ಡೋಸ್‍ಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಎರಡನೇ ಡೋಸ್ ಕೂಡಾ ನೀಡಲಾಗುತ್ತದೆ. ಈ ಪ್ರಕ್ರಿಯೆ ಬಳಿಕ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ವಿವರಿಸಿದ್ದಾರೆ. ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಸೇನೆ ಬರ್ಲಿ ನೋಡ್ಕೊಳ್ತೇನೆ..; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌...

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement