ಕರ್ನಾಟಕದಲ್ಲಿ ಲಾಕ್ಡೌನ್ ಇಲ್ಲ, ಶುಕ್ರವಾರದ ಸಭೆ ಬಳಿಕ ಕರ್ಫ್ಯೂ ಮುಂದುವರಿಕೆ ಬಗ್ಗೆ ನಿರ್ಧಾರ

ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೊನಾ ಗರಿಷ್ಠಮಟ್ಟ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ನೇತೃತ್ವದಲ್ಲಿ ನಡೆದ ವರ್ಚ್ಯುಲ್‌ … Continued

ಪಂಜಾಬ್‌ನಲ್ಲಿ ಫೆ.14ರ ಬದಲಿಗೆ ಈಗ ಫೆಬ್ರವರಿ 20 ರಂದು ಮತದಾನ: ಚುನಾವಣಾ ಆಯೋಗ

ನವದೆಹಲಿ; ಹಲವಾರು ರಾಜಕೀಯ ಪಕ್ಷಗಳು ಮನವಿ ಮಾಡಿದ ನಂತರ ಫೆಬ್ರವರಿ 14 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಚುನಾವಣಾ ಆಯೋಗ (EC) ಮುಂದೂಡಿದೆ. ಒಂದೇ ಹಂತದ ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನ ಈಗ ಫೆಬ್ರವರಿ 20ರಂದು ನಡೆಯಲಿದೆ. ಗುರು ರವಿದಾಸ್ ಜಯಂತಿಯನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 14ರಂದು ಪಂಜಾಬಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ವಿವಿಧ … Continued

ಬೆಂಗಳೂರಿನಲ್ಲಿ ಜನವರಿ 31ರ ವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು : ಕೊರೊನಾ ಹೆಚ್ಚಳ ನಿಯಂತ್ರಣಕ್ಕೆ ತರಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್​ನ ಜನವರಿ 31ರವರೆಗೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ನಗರದಲ್ಲಿ ಜನವರಿ 6ರಿಂದ 19ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಈಗ ಜನವರಿ 31ರ ವರೆಗೂ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, … Continued

ರೈಲು ಬರುತ್ತಿರುವಾಗಲೇ ಮಹಿಳೆಯನ್ನು ರೈಲಿನ ಮುಂದೆ ನೂಕಿದ ವ್ಯಕ್ತಿ…ಕೂದಲೆಳೆ ಅಂತರದಲ್ಲಿ ಬಚಾವ್‌..! ದೃಶ್ಯ ವಿಡಿಯೊದಲ್ಲಿ ಸೆರೆ

ಬೆಲ್ಜಿಯಂನಲ್ಲಿ ರೈಲು ಬರುತ್ತಿರುವಾಗಲೇ ವ್ಯಕ್ತಿಯೊಬ್ಬ ಉದ್ದೇಶಪೂರ್ವವಾಗಿ ಮಹಿಳೆಯೊಬ್ಬಳನ್ನು ರೈಲು ಹಳಿಗೆ ತಳ್ಳಿದರೂ ಆ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮೈ ಜುಂ ಎನ್ನುವ ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇವಲ 30 ಸೆಕೆಂಡುಗಳ ಕ್ಲಿಪ್ ವಿಡಿಯೊ, ಶುಕ್ರವಾರ ಸಂಜೆ ಬ್ರಸೆಲ್ಸ್‌ನ ರೋಜಿಯರ್ ಮೆಟ್ರೋ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿರುವ ಪ್ರಯಾಣಿಕರನ್ನು ತೋರಿಸುತ್ತದೆ. ರೈಲು ನಿಲ್ದಾಣದೊಳಗೆ … Continued

12ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?: ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ನವದೆಹಲಿ: ದೇಶದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಫೆಬ್ರವರಿ ಕೊನೆ ವಾರ ಅಥವಾ ಮಾರ್ಚ್‌ ಮೊದಲ ವಾರದಿಂದ ಈ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಹಾಗೂ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎನ್ .ಕೆ ಅರೋರಾ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು … Continued

ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಕಾಲಿಗೆ ಗುಂಡೇಟು, ಬಂಧನ

ಬೆಂಗಳೂರು: ಪೊಲೀಸರಿಗೆ ಸವಾಲೆಸೆದು ತಲೆ ಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಸೆರೆ ಹಿಡಿಯುವಲ್ಲಿ ಹನುಮಂತನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ (22) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ವಿರುದ್ಧ 4 ಕೊಲೆಯತ್ನ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 21 … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ: ಇಂದು ಸಂಜೆ ಸಿಎಂ ಮಹತ್ವದ ಸಭೆ, ಕಠಿಣ ನಿಯಮ ಜಾರಿಯಾಗುತ್ತಾ..?

ಬೆಂಗಳೂ: ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಏರಿಕೆ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಈಗ ಜಾರಿಗೊಳಿಸಿರುವ ನಿರ್ಬಂಧಗಳು … Continued

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಹಾಗೂದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಿತು. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಈ ಯಾಗ ನಡೆಯುತ್ತಿದೆ. ವೇದಮೂರ್ತಿ ನಾಗೇಂದ್ರ ಭಾರದ್ವಾಜ ಸುರತ್ಕಲ್ ಪ್ರಧಾನ ಪೌರೋಹಿತ್ಯದಲ್ಲಿ ಶೃಂಗೇರಿ, ಬೆಂಗಳೂರು, ಕಾಸರಗೋಡು, … Continued

365 ಬಗೆಯ ತಿನಿಸುಗಳ ಮೂಲಕ ಭಾವಿ ಅಳಿಯನಿಗೆ ಸಂಕ್ರಾಂತಿ ಹಬ್ಬಕ್ಕೆ ಸ್ವಾಗತ ನೀಡಿದ ಆಂಧ್ರದ ಕುಟುಂಬ..!

ಆಂಧ್ರಪ್ರದೇಶದ ಭಾವಿ ಅಳಿಯನಿಗೆ ಸಂಕ್ರಾಂತಿ ಹಬ್ಬದಂದು ಅವನ ಅತ್ತೆ-ಮಾವಂದರು ಭವ್ಯವಾದ ಔತಣವನ್ನು ಏರ್ಪಡಿಸಿದ್ದರು.. ಇದು ಅಂತಿಂಧ ಔತಣವಲ್ಲ, ಇದು ರಾಜ ಮಹಾರಾಜರ ಮನೆಯಲ್ಲಿಯೂ ಸಿಗುವುದು ವಿರಳ. ಏಕೆಂದರೆ ಅವರು ತಮ್ಮ ಭಾವಿ ಅಳಿಯನಿಗೆ ವರ್ಷದ 365 ದಿನಗಳನ್ನು ಪರಿಗಣಿಸಿ 365 ವಿಧದ ಭಕ್ಷ್ಯಗಳನ್ನು ಸಿದ್ಧಗೊಳಿಸಿದ್ದರು..!. ಪಶ್ಚಿಮ ಗೋದಾವರಿ ಜಿಲ್ಲೆಯ ನರಸಪುರಂನ ಆಂಧ್ರದ ಕುಟುಂಬವೊಂದು ಮಕರ ಸಂಕ್ರಾಂತಿ … Continued

ಬಲವಂತದಿಂದ ಯಾರಿಗೂ ಕೋವಿಡ್‌ ಲಸಿಕೆ ನೀಡುವುದಿಲ್ಲ: ಸುಪ್ರೀಂಕೋರ್ಟಿಗೆ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ : ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿಗೆ ತಿಳಿಸಿದೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಡೆಯಲು ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು, ಕೇಂದ್ರವು ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಮಾರ್ಗಸೂಚಿಯನ್ನೂ ನೀಡಿಲ್ಲ … Continued