ಕಾರಿನ ಟೈರ್ ಸ್ಫೋಟದಿಂದ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಚಿಕ್ಕಮಗಳೂರು: ಕಾರಿನ ಟೈರ್ ಸ್ಫೋಟದಿಂದ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಆಗುಂಬೆಯಿಂದ ಕೊಪ್ಪಕ್ಕೆ ಬರುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಒಯ್ಯಲಾಗಿದೆ.
ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ನಿಮ್ಮ ಕಾಮೆಂಟ್ ಬರೆಯಿರಿ

advertisement