ಭಾರತೀಯ ಸೇನೆಯಿಂದ ಹಿಮಪಾತದಲ್ಲಿ ಸಿಲುಕಿದ್ದ 14 ಮಂದಿ ರಕ್ಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್-ಚೌಕಿಬಲ್ ಹೆದ್ದಾರಿಯಲ್ಲಿ ಹಿಮ ಕುಸಿತದಲ್ಲಿ ಸಿಲುಕಿದ್ದ 14 ನಾಗರಿಕರನ್ನು ಭಾರತೀಯ ಸೇನೆ ರಕ್ಷಿಸಿದೆ.
ಹಿಮಪಾತದಲ್ಲಿ 14 ಜನರು ಸಿಲುಕಿಕೊಂಡಿದ್ದರು. ಅವರನ್ನು ಭಾರತೀಯ ಸೈನಿಕರು ರಕ್ಷಣೆ ಮಾಡಿದ್ದು, ಅವರನ್ನು ಹತ್ತಿರದ ಸೇನಾ ಶಿಬಿರಕ್ಕೆ ಕರೆದೊಯ್ದು ಆಹಾರ ನೀಡಲಾಗಿದೆ.

ಸಿಲುಕಿಕೊಂಡವರಲ್ಲಿ ಹೃದ್ರೋಗಿಗಳು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸಹ ಇದ್ದರು. ಪ್ರಯಾಣಿಕರು ತುಂಬಿರುವ ವಾಹನಗಳ ಬಗ್ಗೆ ಮಾಹಿತಿ ಪಡೆಯಲಾಗಿತ್ತು. ನಂತರ ಕ್ಯಾಪ್ಟನ್ ಕುಲ್ಜೋತ್ ಸಿಂಗ್ ಅವರ ನೇತೃತ್ವದಲ್ಲಿ ನೀಲಂ ಕಂಪನಿ ಆಪರೇಟಿಂಗ್ ಬೇಸ್‍ನಿಂದ ಭಾರತೀಯ ಸೇನೆಯ ಹಿಮಪಾತ ರಕ್ಷಣಾ ತಂಡವು ಕಾರ್ಯಪ್ರವೃತ್ತವಾಯಿತು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಪ್ರಯಾಣಿಕರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ರಕ್ಷಿಸಲ್ಪಟ್ಟ ನಾಗರಿಕರು ಸಮಯೋಚಿತ ಕ್ರಮಕ್ಕಾಗಿ ಮತ್ತು ತಮ್ಮ ಜೀವಗಳನ್ನು ಉಳಿಸಿದ್ದಕ್ಕಾಗಿ ಸೇನೆಗೆ ಕೃತಜ್ಞತೆ ಸಲ್ಲಿಸಿದರು ಎಂದು ಭಾರತೀಯ ಸೇನೆ ಹೇಳಿದೆ.

advertisement

ನಿಮ್ಮ ಕಾಮೆಂಟ್ ಬರೆಯಿರಿ